

ಮಂಗಳೂರು : ಮುಕ್ಕದಲ್ಲಿರುವ ಶ್ರೀನಿವಾಸ ಯುನಿವರ್ಸಿಟಿ ಇನ್ಸ್‌ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆಯ ಓದು ಕಾರ್ಯಕ್ರಮ ನಡೆಯಿತು.ಕಾಲೇಜಿನ ಮುಖ್ಯಸ್ಥ ಡಾ. ಥಾಮಸ್ ಪಿಂಟೊ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಮಹತ್ವದ ಕುರಿತು ಮಾಹಿತಿ ನೀಡಿದರು.
ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬಂದಿ ಹಾಗೂ ವಿದ್ಯಾರ್ಥಿಗಳು ಭಾರತೀಯ ಸಂವಿಧಾನದ ಪೀಠಿಕೆಯನ್ನು ಓದಿದರು.