ಬಿಜೆಪಿಯಿಂದ ಹೆಣದ ಮೇಲೆ ರಾಜಕೀಯ, ಸುಹಾಸ್‌ ಶೆಟ್ಟಿ ಹತ್ಯೆಯಿಂದ ಕರಾವಳಿ ಕೊತಕೊತ- ದ.ಕ ಉಸ್ತುವಾರಿ ಸಚಿವರು ಹೇಳಿದ್ದೇನು?

Screenshot_2025-05-02-11-50-50-89_40deb401b9ffe8e1df2f1cc5ba480b12
Published on

ಮಂಗಳೂರು : ಕೊಲೆಯಾದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ನ್ಯಾಯ ಕೊಡಿಸುವುದು ನಮ್ಮ ಸರ್ಕಾರದ ಜವಾಬ್ದಾರಿ. ನಾವು ಕೇವಲ ಬಾಯಿ ಮಾತಿನಲ್ಲಿ ಕಠಿಣ ಕ್ರಮದ ಭರವಸೆ ನೀಡುವವರಲ್ಲ. ಬದಲಿಗೆ ಕಾನೂನಿನ ಅನುಸಾರ ಈ ಕೃತ್ಯ ಎಸಗಿದವರಿಗೆ ತಕ್ಕ ಪಾಠ ಕಲಿಸುವವರು. ಇದು ನಿಶ್ಚಿತ. ಅಂತಿಮವಾಗಿ ಭೀಕರ ಕೃತ್ಯದಲ್ಲಿ ಜೀವ ಕಳೆದುಕೊಂಡ ಸುಹಾಸ್ ಶೆಟ್ಟಿ ಆತ್ಮಕ್ಕೆ ಶಾಂತಿ ಬೇಡುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬಿಜೆಪಿಯಿಂದ ಹೆಣದ ಮೇಲೆ ರಾಜಕೀಯ: ಬಿಜೆಪಿಯವರು ಈಗಾಗಲೇ ಸುಹಾಸ್ ಪ್ರಕರಣವನ್ನು ರಾಜಕೀಯ ಮಾಡಲು ಹೊರಟಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡಲು ಹೊರಟಿರುವ ಬಿಜೆಪಿಯವರಿಗೆ ಒಂದು ಮಾತು. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ನಿಮ್ಮದು ಕೂಡ ಇದೆ. ದ್ವೇಷ ಹರಡುವ ಮೂಲಕ, ಪ್ರಚೋದಿಸುವ ಮೂಲಕ ಮಂಗಳೂರಿನಲ್ಲಿ ಶಾಂತಿ ಭಂಗ ಮಾಡುವ ದುಷ್ಟ ಕೆಲಸಕ್ಕೆ ಕೈ ಹಾಕಬೇಡಿ. ಜವಾಬ್ದಾರಿಯಿಂದ ವರ್ತಿಸಿ. ಸುಹಾಸ್ ಅಗಲಿಕೆಯ ನೋವಿನಿಂದ ಬಳಲುತ್ತಿರುವ ಅವರ ಕುಟುಂಬಕ್ಕೆ ನನ್ನ ಕಡೆಯಿಂದ ಮನಃಪೂರ್ವಕ ಸಾಂತ್ವನಗಳು ಎಂದು ದಿನೇಶ್ ಗುಂಡೂರಾವ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net