ವಿಭಾಗ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

shuttle
Published on

ಕುಶಾಲನಗರ:

ಶಾಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ಹಾಗೂ ಫಾತಿಮಾ ವಿದ್ಯಾ ಸಂಸ್ಥೆ ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಜಂಪ್ ಸ್ಮ್ಯಾಶ್ ಒಳಾಂಗಣದಲ್ಲಿ ಎರಡು ದಿನಗಳ ಕಾಲ ಏರ್ಪಡಿಸಿರುವ ಮೈಸೂರು ವಿಭಾಗ ಮಟ್ಟದ 14 ಮತ್ತು 17 ವಯೋಮಿತಿಯ ಬಾಲಕ, ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಮಂಗಳವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಕ್ರೀಡೆಯಿಂದ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು. ಕ್ರೀಡೆ ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯವನ್ನು ರೂಪಿಸುತ್ತದೆ. ಕ್ರೀಡಾ ಸಾಧನೆಗೆ ನಮ್ಮ ಸರ್ಕಾರದ ಉದ್ಯೋಗ ನೇಮಕಾತಿಯಲ್ಲಿ ಶೇ.2 ಅವಕಾಶ ಕೊಟ್ಟಿದೆ. ಈ ಅವಕಾಶವನ್ನು ಕ್ರೀಡಾಪಟುಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಕೊಡಗು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ. ಸದಾಶಿವಯ್ಯ ಎಸ್. ಪಲ್ಲೇದ್ ಮಾತನಾಡಿ, ಮೈಸೂರು ವಿಭಾಗದ ಎಲ್ಲಾ ಎಂಟು ಜಿಲ್ಲೆಗಳ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. ಊಟ, ಉಪಾಹಾರ ಮತ್ತು ವಸತಿ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಮಾಡಲಾಗಿದೆ. ಜಂಪ್ ಸ್ಮ್ಯಾಶ್ ಅಕಾಡೆಮಿಯ ವ್ಯವಸ್ಥಾಪಕ ಶರತ್ ಉಚಿತವಾಗಿ ಅಂಕಣದ ವ್ಯವಸ್ಥೆ ಕಲ್ಪಿಸಿದ್ದಾರೆ. ಫಾತಿಮಾ ವಿದ್ಯಾಸಂಸ್ಥೆ ಇಲಾಖೆಯೊಂದಿಗೆ ಸಹಯೋಗ ನೀಡಿ ಪಂದ್ಯಾವಳಿಯ ಯಶಸ್ವಿಗೆ ಶ್ರಮಿಸಿದ್ದಾರೆ ಎಂದರು.

ಈ ಸಂದರ್ಭ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕೆ.ಆರ್. ರತ್ನ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಎಚ್.ಎನ್. ಮಂಜುನಾಥ್, ಕೊಡಗು ಜಿಲ್ಲಾ ಗ್ರೇಡ್ 2 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪೂರ್ಣೇಶ್, ಸೋಮವಾರಪೇಟೆ ತಾಲೂಕು ಗ್ರೇಡ್ ಒನ್ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷೆ ಎನ್.ವಿ. ಸುಜಾತ, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್, ನಿವೃತ್ತ ಶಿಕ್ಷಕ ಉ.ರಾ. ನಾಗೇಶ್, ಕರುಂಬಯ್ಯ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಎಂ.ಎಲ್. ಸುಕುಮಾರಿ ಮತ್ತಿತರರು ಇದ್ದರು.

ಮೈಸೂರು ವಿಭಾಗದ ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಯ ಕ್ರೀಡಾಪಟುಗಳು ಸೇರಿದಂತೆ ಒಟ್ಟು 32 ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net