ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ

1
Published on

ಮೈಸೂರು: ಮೈಸೂರು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗ ಮತ್ತು ಟೆರೇಷಿಯನ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಕಲ್ಯಾಣಮ್ಮ ಮತ್ತು ಬಸವರಾಜು ಸ್ಮರಣಾರ್ಥ 2022-23ನೇ ಸಾಲಿನ ನಗರ ಅಂತರ ಕಾಲೇಜು ಮಹಿಳೆಯರ ಹಾಗೂ ಪುರುಷರ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಗುರುವಾರ ಚಾಲನೆ ದೊರೆಯಿತು.


ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಪಂದ್ಯಾವಳಿಗೆ ಚಾಲನೆ ನೀಡಿ ಕ್ರೀಡಾಪಟುಗಳಿಗೆ ಶುಭ ಕೋರಿದರು.

ಕುಲಪತಿ ಪ್ರೊ.ಎಚ್.ರಾಜಶೇಖರ್, ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಬಸವಲಿಂಗು, ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಡಾ.ಪಿ.ಕೃಷ್ಣಯ್ಯ ಇತರರಿದ್ದರು. ಪಂದ್ಯಾವಳಿ ಜ.13ರವರೆಗೆ ನಡೆಯಲಿದ್ದು, 29 ಮಹಿಳಾ ಹಾಗೂ 27 ಪುರುಷ ತಂಡಗಳು ಪಾಲ್ಗೊಂಡಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net