ಜಿಲ್ಲಾಸ್ಪತ್ರೆಗೆ ಶ್ಯಾಮ್ ಭಟ್ ಭೇಟಿ

27 ckm 5
ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ ಭಟ್ ಹಾಗೂ ಸದಸ್ಯ ಸುರೇಶ್ ಒಂಟಿಗೋಡು ರೋಗಿಗಳ ಆರೋಗ್ಯ ವಿಚಾರಿಸಿ ಅವರಿಂದ ಮಾಹಿತಿ ಪಡೆದರು. ಜಿಲ್ಲಾ ಸರ್ಜನ್ ಡಾ.ಮೋಹನ್ ಕುಮಾರ್ ಉಪಸ್ಥಿತರಿದ್ದರು.
Published on

ಚಿಕ್ಕಮಗಳೂರು: ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ಒಳ ರೋಗಿಗಳ ಸಂಖ್ಯೆ ಹೆಚ್ಚಿದೆ ಆದರೆ ಸ್ಥಳಾವಕಾಶ ಕಡಿಮೆ ಇದೆ. ಹೀಗಾಗಿ ನೂತನವಾಗಿ ನಿರ್ಮಾಣವಾಗಿರುವ ಆಸ್ಪತ್ರೆ ಬಳಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್ ಭಟ್ ತಿಳಿಸಿದರು.

ನಗರದ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಕಾರಾಗೃಹ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಸ್ಪತ್ರೆಯಲ್ಲಿ ಪ್ರಮುಖವಾಗಿ ಸ್ಥಳವಕಾಶದ ಕೊರತೆ ಕಾಡುತ್ತಿದೆ ಪ್ರತಿದಿನ ಒಂದು ಸಾವಿರಕ್ಕೂ ಅಧಿಕ ಹೊರರೋಗಿಗಳು ಬಂದು ಹೋಗುತ್ತಿದ್ದಾರೆ. ಒಳ ರೋಗಿಗಳ ಸಂಖ್ಯೆಯು ಹೆಚ್ಚಿರುವುದರಿಂದ ಸ್ಥಳದ ಕೊರತೆ ಇರುವುದು ಕಂಡು ಬಂದಿದೆ ಎಂದರು.
ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶೌಚಗೃಹಗಳಲ್ಲಿ ಸ್ವಚ್ಛತೆ ಇಲ್ಲದಿರುವುದು ಕಂಡು ಬಂದಿದೆ. ಈ ಬಗ್ಗೆ ಆಸ್ಪತ್ರೆಯ ಮುಖ್ಯಸ್ಥರಿಗೆ ತಿಳಿಸಲಾಗಿದೆ. ಶೀಘ್ರವೇ ಶೌಚಗೃಹ ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಆಸ್ಪತ್ರೆಯ ಮುಖ್ಯಸ್ಥರು ತಿಳಿಸಿದ್ದಾರೆ ಎಂದು ಹೇಳಿದರು.
ಜಿಲ್ಲಾಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಹುದ್ದೆ ಖಾಲಿ ಇದೆ. ಹೀಗಾಗಿ ಎಕ್ಸ್ ರೇ ಮಾಡಿಸಲು ಹೊರಗಡೆ ಕಳುಹಿಸಲಾಗುತ್ತಿದೆ ಎಂದು ಜಿಲ್ಲಾ ಸರ್ಜನ್ ಡಾ.ಮೋಹನ್ ಕುಮಾರ್ ಮಾಹಿತಿ ನೀಡಿದ್ದಾರೆ. ಶೀಘ್ರವೇ ರೇಡಿಯಾಲಜಿಸ್ಟ್ ನೇಮಕ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುತ್ತೇವೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಶುಶ್ರೂಷಕರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳನ್ನು ಬಳಸಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ರೋಗಿಗಳಿಗೆ ಯಾವುದೇ ತೊಂದರೆಯಾಗದAತೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.
ಆಯೋಗದ ಸದಸ್ಯ ಸುರೇಶ್ ಒಂಟಿಗೋಡು ಮಾತನಾಡಿ, ಆಸ್ಪತ್ರೆಯ ಟಿಕೆಟ್ ಕೌಂಟರ್ ನಲ್ಲಿ ಸರ್ವರ್ ಸಮಸ್ಯೆ ಇರುವುದರಿಂದಾಗಿ ರೋಗಿಗಳಿಗೆ ಚೀಟಿಗಳನ್ನು ವಿತರಿಸುವುದು ಸ್ವಲ್ಪ ವಿಳಂಬವಾಗುತ್ತಿರುವುದು ಕಂಡುಬAದಿದೆ. ಇದನ್ನು ಸರಿಪಡಿಸುವಂತೆ ಸಂಬAಧಿಸಿದವರಿಗೆ ತಿಳಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ. ಮೋಹನ್ ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net