ಮುಖರ್ಜಿ ಕಾರ್ಯಕರ್ತರಿಗೆ ಪ್ರಾತ:ಸ್ಮರಣೀಯರು

udp-23-bjp
Published on

ಉಡುಪಿ: ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಡಾ. ಶ್ಯಾಮಪ್ರಸಾದ್​ ಮುಖರ್ಜಿ ಬಿಜೆಪಿ ಕಾರ್ಯಕರ್ತರಿಗೆ ಪ್ರಾತ@ಸ್ಮರಣೀಯರಾಗಿದ್ದಾರೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ಜನಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್​ ಮುಖರ್ಜಿ ಸಂಸ್ಮರಣೆ ಹಾಗೂ 'ಬಲಿದಾನ ದಿವಸ್​' ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಶ್ಮೀರಕ್ಕಾಗಿ ಹೋರಾಟ ನಡೆಸಿ ಬಂಧನಕ್ಕೆ ಒಳಗಾಗಿ ಜೈಲಿನಲ್ಲಿ ಸಂಶಯಾಸ್ಪದವಾಗಿ ಮೃತಪಟ್ಟ ಹಿರಿಯ ನಾಯಕ ಮುಖರ್ಜಿ ಅವರ ಸಾವಿನ ಬಗ್ಗೆ ನೆಹರೂ ಸರ್ಕಾರ ಯಾವುದೇ ತನಿಖೆ ಕೈಗೊಳ್ಳಲಿಲ್ಲ ಎಂಬುದು ದುರದೃಷ್ಟಕರ ಸಂಗತಿ ಎಂದರು. ಶಾಸಕ ಸುನೀಲ್​ ಕುಮಾರ್​, ಜಿಲ್ಲಾಧ್ಯಕ್ಷ ಕುತ್ಯಾರು ನವೀನ್​ ಶೆಟ್ಟಿ, ವಿಭಾಗ ಪ್ರಭಾರಿ ಉದಯ್​ ಕುಮಾರ್​ ಶೆಟ್ಟಿ, ರೇಶ್ಮಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net