ಶ್ಯಾಮ ಪ್ರಸಾದ ಮುಖರ್ಜಿ ಕೇವಲ ರಾಜಕಾರಣಿಯಲ್ಲ

6 ckm 3
ಚಿಕ್ಕಮಗಳೂರು ಬಿಜೆಪಿ ಕಚೇರಿಯಲ್ಲಿ ಜನ ಸಂಘ ಸಂಸ್ಥಾಪಕ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನ ಕಾರ್ಯಕ್ರಮದಲ್ಲಿ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಎಂ.ಆರ್.ದೇವರಾಜ ಶೆಟ್ಟಿ, ಸ.ಗಿರಿಜಾ ಶಂಕರ್, ಬಿ.ರಾಜಪ್ಪ, ಪುಷ್ಪರಾಜ್, ರವೀಂದ್ರ ಬೆಳವಾಡಿ, ಪುಣ್ಯಪಾಲ್ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ರಾಷ್ಟç ಕಟ್ಟುವ ಕಾರ್ಯದ ಜೊತೆಗೆ ಜನ ಸಂಘವನ್ನೂ ಸ್ಥಾಪಿಸುವ ಮೂಲಕ ಶ್ಯಾಮ ಪ್ರಸಾದ್ ಮುಖರ್ಜಿ ಅವರು ಸಾರ್ಥಕ ಜೀವನ ನಡೆಸಿದ್ದಾರೆ ಎಂದು ಹಿರಿಯ ಪತ್ರಕರ್ತ ಸ.ಗಿರಿಜಾ ಶಂಕರ್ ಅಭಿಪ್ರಾಯಪಟ್ಟರು.

ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಜನಸಂಘದ ಸಂಸ್ಥಾಪಕ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನ ಕಾರ್ಯಕ್ರಮದಲ್ಲಿ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಬದುಕು, ಹೋರಾಟ ಕುರಿತು ಉಪನ್ಯಾಸ ನೀಡಿದ ಅವರು, ಶ್ಯಾಮ ಪ್ರಸಾದ್ ಮುಖರ್ಜಿ ಅವರು ಕೇವಲ ರಾಜಕಾರಣಿಯಾಗಿರದೆ ರಾಜಕೀಯ ಮುತ್ಸದಿಯಾಗಿದ್ದರು ಎಂದರು.
ಗುಲಾಮಿ ಪದ್ಧತಿಯಿಂದ ದೇಶವನ್ನು ಮುಕ್ತಗೊಳಿಸಲು ಮುಖರ್ಜಿ ಹೋರಾಡಿದ್ದಾರೆ. ಕಾಶ್ಮೀರದಲ್ಲಿ ೩೭೦ ವಿಧಿಯನ್ನು ಜಾರಿಗೊಳಿಸಿದ್ದನ್ನು ಬಲವಾಗಿ ವಿರೋಧಿಸಿದ್ದ ಮುಖರ್ಜಿ ಒಂದು ದೇಶ, ಒಂದು ಧ್ವಜ, ಒಬ್ಬ ಪ್ರಧಾನಿ ಇರಬೇಕು ಎಂಬ ಸಿದ್ಧಾಂತಕ್ಕೆ ಕಟಿಬದ್ಧರಾಗಿ ಹೋರಾಡುವ ಮೂಲಕ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ಅವರ ಜನ್ಮ ದಿನೋತ್ಸವ ಆಚರಿಸಿದರೆ ಸಾಲದು. ಅವರ ಸೈದ್ಧಾಂತಿಕ ಕಾರ್ಯಗಳನ್ನು ಪ್ರತಿ ದಿನ ಸ್ಮರಿಸುವ ಕಾರ್ಯ ನಡೆಯಬೇಕು ಎಂದು ಸಲಹೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜಶೆಟ್ಟಿ ಮಾತನಾಡಿ, ಪಕ್ಷ ಕಟ್ಟಿ ಬೆಳೆಸಿದ್ದ ಮುಖರ್ಜಿ ಅವರು ಎಂದೂ ಅಧಿಕಾರಕ್ಕಾಗಿ ಪ್ರಯತ್ನಿಸಲಿಲ್ಲ. ದೇಶದ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ನಿಸ್ವಾರ್ಥದಿಂದ ಮಾಡಿರುವ ಕಾರ್ಯಗಳು ನಮಗೆ ದಾರಿ ದೀಪವಾಗಿವೆ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ಬೆಳವಾಡಿ, ಪುಣ್ಯಪಾಲ್, ಚಿತ್ರದುರ್ಗ ಪ್ರಭಾರಿ ಸಿ.ಆರ್.ಪ್ರೇಮಕುಮಾರ್, ರಾಜ್ಯ ಎಸ್ಸಿ ಮೋರ್ಚಾ ಕಾರ್ಯದರ್ಶಿ ಸೀತರಾಮ ಭರಣ್ಯ, ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಬಿ.ರಾಜಪ್ಪ, ನಗರ ಬಿಜೆಪಿ ಮೋರ್ಚಾ ಅಧ್ಯಕ್ಷ ಪುಷ್ಪರಾಜ್, ಹಿರಿಯ ಮುಖಂಡ ಕೋಟೆ ರಂಗನಾಥ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net