ಅನಾರೋಗ್ಯದಿಂದ ಬೇಸತ್ತು ಇಬ್ಬರು ಆತ್ಮಹತ್ಯೆ

Man Death 29 Feb 20
Published on

ಖಾನಾಪುರ: ತಾಲೂಕಿನ ಪಾರಿಶ್ವಾಡ ಗ್ರಾಮದಲ್ಲಿ ಸೋಮವಾರ ಥೈರಾಯ್ಡ ರೋಗದಿಂದ ಮನನೊಂದ ಮಹಿಳೆಯೊಬ್ಬರು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಮೀಜಾ ಶಬ್ಬೀರ್‌ಹ್ಮದ ಬಸರಿಕಟ್ಟಿ (56) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸೋಮವಾರ ಬೆಳಗ್ಗೆ ತಮ್ಮ ಮನೆಯ ಮಹಡಿ ಮೇಲೆ ತೆರಳಿದ್ದ ರಮೀಜಾ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಖಾನಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಲೂಕಿನ ಬರಗಾಂವ ಗ್ರಾಮದ ನಿವಾಸಿ ಲಕ್ಷ್ಮೀ ಅರ್ಜುನ ಸುತಾರ (68) ತಮಗಿದ್ದ ಕ್ಯಾನ್ಸರ್ ರೋಗದಿಂದ ಬೇಸತ್ತು ಗ್ರಾಮದ ಹೊರವಲಯದ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ಯಾನ್ಸರ್ ಪೀಡಿತರಾಗಿದ್ದ ಲಕ್ಷ್ಮೀ ಅವರಿಗೆ ಮೂವರು ಪುತ್ರರು, ಪುತ್ರಿ ಇದ್ದಾರೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net