ಕಾಳಜಿಯಿಂದ ಅನಾರೋಗ್ಯ ದೂರ

ಕಾಳಜಿಯಿಂದ ಅನಾರೋಗ್ಯ ದೂರ
Published on

 ಅರಸೀಕೆರೆ (ಗ್ರಾಮಾಂತರ): ಮಹಿಳೆಯರು, ಹದಿಹರೆಯದವರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದರೆ ಮುಂದಾಗುವ ಅನಾರೋಗ್ಯವನ್ನು ತಡೆಗಟ್ಟಬಹುದು ಎಂದು ಹಾರನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನೀರಿಕ್ಷಣಾ ಅಧಿಕಾರಿ ಪ್ರದೀಪ್‌ಕುಮಾರ್ ಹೇಳಿದರು.

ಗ್ರಾಮ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಇತ್ತೀಚೆಗೆ ನಡೆದ ಹಾರನಹಳ್ಳಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ, ಗ್ರಾಮಸ್ಥರಿಗೆ ಹಮ್ಮಿಕೊಂಡಿದ್ದ ಆರೋಗ್ಯ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಕ್ಷಯ, ಬಿಪಿ, ಮಧುಮೇಹ ಇರುವವರು ತಿಂಗಳಿಗೆ ಒಂದು ಬಾರಿಯಾದರೂ ತಪಾಸಣೆ ಮಾಡಿಸಬೇಕು. ಸ್ವಚ್ಛತೆಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ಗ್ರಾ.ಪಂ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.

ಮಕ್ಕಳ ಮತ್ತು ಶಿಶು ಇಲಾಖೆ ಅಧಿಕಾರಿ ರಾಧಮ್ಮ ಮಾತನಾಡಿ, ಬಾಲ್ಯ ವಿವಾಹ ತಡೆಗಟ್ಟುವ ಬಗ್ಗೆ, ಮಹಿಳೆಯರ ಆರೋಗ್ಯ, ಬಾಣಂತಿಯರ ಆರೋಗ್ಯ, ಸರ್ಕಾರದಿಂದ ದೊರಕುವ ಸೌಲಭ್ಯಗಳ ಬಗ್ಗೆ ವಿವರಿಸಿದರು.

ಗ್ರಾ.ಪಂ. ಪಿಡಿಒ ರಾಧಮ್ಮ ಮಾತನಾಡಿ, ಗ್ರಾಮ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕೆಲವರು ಚರಂಡಿಗೆ ಮನೆಯ ಕಸ ಸುರಿಯುತ್ತಿದ್ದು, ಇದರಿಂದ ಚರಂಡಿ ನೀರು ಸರಾಗವಾಗಿ ಹರಿಯಲು ತೊಂದರೆಯಾಗುತ್ತಿದೆ. ಯಾರು ಕೂಡ ಚರಂಡಿಗೆ ಕಸ ಸುರಿಯದೆ ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಬೇಕೆಂದರು.

ಗ್ರಾ.ಪಂ. ಅಧ್ಯಕ್ಷೆ ಗಂಗಮ್ಮ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾ.ಪಂ.ಸಿಬ್ಬಂದಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net