ಬನ್ನೇರುಘಟ್ಟ ಉದ್ಯಾನಕ್ಕೆ ಸಿದ್ಧಗಂಗಾ ಶ್ರೀಗಳ ಭೇಟಿ, ವನ್ಯಧಾಮ ವೀಕ್ಷಣೆ, ಮಾವುತರ ಮಕ್ಕಳೊಂದಿಗೆ ಸಂವಾದ

23ank news and photos 04
Published on

ಆನೇಕಲ್: ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಶನಿವಾರ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡಿ ಆನೆಗಳ ಕಾವಾಡಿಗಳು ಮತ್ತು ಮಾವುತರ ಮಕ್ಕಳೊಂದಿಗೆ ಸಂವಹನ ನಡೆಸಿದರು. ಮಕ್ಕಳಿಗೆ ಹಣ್ಣು ಹಂಪಲುಗಳನ್ನು ವಿತರಿಸಿ, ಆಶೀರ್ವಾದ ಮಾಡಿದರು.

ಮೃಗಾಲಯದ ರೂಪಾ ಆನೆಯ ಆರು ತಿಂಗಳ ಮರಿಗೆ ಬಸವ ಎಂದು ನಾಮಕರಣ ಮಾಡಿದರು. ನಂತರ ಮಾತನಾಡಿದ ಅವರು, ಪ್ರಾಣಿಗಳನ್ನು ಪ್ರೀತಿಸಬೇಕು. ಅವುಗಳ ಆರೈಕೆ ಮಾಡುವುದು ನಮ್ಮೆಲ್ಲರ ಆದ್ಯತೆ ಆಗಬೇಕು. ಆಗ ಮಾತ್ರ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದರು.

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಣಾಧಿಕಾರಿ ವನಶ್ರೀ ವಿಪಿನ್ ಸಿಂಗ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net