

ಮಂಡ್ಯ: ನಗರಕ್ಕೆ ಆಗಮಿಸಿದ ಪದ್ಮಭೂಷಣ, ತ್ರಿವಿಧ ದಾಸೂಹಿ, ಲಿಂಗೈಕ್ಯ ಡಾ.ಶಿವಕುವಾರ ಸ್ವಾಮೀಜಿ ಅವರ ಗದ್ದುಗೆಗೆ ತೃತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮದ ಸಿದ್ಧಗಂಗಾ ಪ್ರಚಾರ ರಥಕ್ಕೆ ಭಾನುವಾರ ಅದ್ದೂರಿ ಸ್ವಾಗತ ನೀಡಲಾಯಿತು.
ಜಿಲ್ಲಾಧಿಕಾರಿ ಕಚೇರಿ ಬಳಿ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಶ್ರೀಮಠದ ಭಕ್ತರು ಪುಷ್ಪ ನಮನ ಸಲ್ಲಿಸುವ ಮೂಲಕ ವೀರಗಾಸೆ, ಪೂಜಾ ಕುಣಿತ ತಮಟೆನಾದದೊಂದಿಗೆ ಸ್ವಾಗತಿಸಿದರು. ಬಳಿಕ ಮೆರವಣಿಗೆಯಲ್ಲಿ ನಗರದ ಪ್ರಮುಖ ರಸ್ತೆಗಳು ವೃತ್ತಗಳಲ್ಲಿ ಸಂಚರಿಸಿತು.
ನ.21ರಂದು ತುಮಕೂರಿನ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ನಡೆಯಲಿರುವ ಭಕ್ತಿ ಕಾರ್ಯಕ್ರಮದಲ್ಲಿ ಸುವಾರು 5 ಲಕ್ಷಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ. ತಾವು ಸಹ ಭಾಗಿಯಾಗಬೇಕು ಎಂದು ಪ್ರಚಾರ ನಡೆಸಿದರು.
ಶಾಸಕ ಎಂ.ಶ್ರೀನಿವಾಸ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿ.ಪಂ ಸಿಇಒ ಶಾಂತಾ ಎಲ್.ಹುಲ್ಮನಿ, ಸಮಾಜ ಸೇವಕ ಕೆ.ಕೆ.ರಾಧಾಕೃಷ್ಣ ಕೀಲಾರ, ವೀರಶೈವ ಲಿಂಗಾಯತ ಸಮುದಾಯದ ಮುಖಂಡರಾದ ಗುರುಪ್ರಸಾದ್, ಮಂಡಿಬೆಟ್ಟಹಳ್ಳಿ ಮಂಜುನಾಥ್ ಇತರರಿದ್ದರು.