

ಗಂಗೊಳ್ಳಿ: ರನ್ನರ್ಸ್ ಕ್ಲಬ್ ಮತ್ತು ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯ 101ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ್ದ ಉಡುಪಿ ಮ್ಯಾರಥಾನ್-2024 ಸ್ಪರ್ಧೆಯಲ್ಲಿ 14 ವರ್ಷದೊಳಗಿನ ವಿಭಾಗದಲ್ಲಿ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಸಿದ್ದಲಿಂಗ ವಾಲೀಕಾರ್ ತೃತೀಯ ಸ್ಥಾನ ಪಡೆದಿದ್ದಾರೆ. ದೇಶದಾದ್ಯಂತ ಸುಮಾರು 1500 ಸ್ಪರ್ಧಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿದ್ದು ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಬಹುಮಾನ ವಿತರಿಸಿ ಶುಭ ಹಾರೈಸಿದರು. ಶ್ರೀ ಸಿದ್ಧಿವಿನಾಯಕ ಶಾಲೆಯ ಪ್ರಾಂಶುಪಾಲ ಶರಣ ಕುಮಾರ ಅಭಿನಂದಿಸಿದ್ದಾರೆ.