ಅಹಿಂದ ವರ್ಗದ ಮಕ್ಕಳಿಗೆ ಅನ್ಯಾಯ

MANAVI
ರಾಜ್ಯ ಸರ್ಕಾರದ ನೀತಿ ಖಂಡಿಸಿ ಕಾರಟಗಿಯಲ್ಲಿ ಎಸ್‌ಎಫ್‌ಐ ತಾಲೂಕು ಘಟಕದ ಪದಾಧಿಕಾರಿಗಳು ತಹಸಿಲ್ ಕಚೇರಿ ನೌಕರಗೆ ಮನವಿ ಸಲ್ಲಿಸಿದರು. ಸಂಘಟನೆ ರಾಜ್ಯಾಧ್ಯಕ್ಷ ಅಮರೇಶ ಕಡಗದ, ಕಾರ್ಯದರ್ಶಿ ಶಿವಕುಮಾರ್, ಹನುಮಂತ ಮುಕ್ಕುಂಪಿ, ಮೌನೇಶ, ದರ್ಶನ, ಗುನ್ನೆಪ್ಪ ಇದ್ದರು.
Published on

ಸಿದ್ದಾಪುರ: ಅಹಿಂದ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಯೋಜನೆಯಲ್ಲಿ ಕತ್ತರಿ ಪ್ರಯೋಗ ಮಾಡಿರುವ ರಾಜ್ಯ ಸರ್ಕಾರದ ನೀತಿ ಖಂಡಿಸಿ ಎಸ್‌ಎಫ್‌ಐ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಕಾರಟಗಿಯಲ್ಲಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಬಳಿಕ ಸಂಘಟನೆಯ ರಾಜ್ಯಾಧ್ಯಕ್ಷ ಅಮರೇಶ ಕಡಗದ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯಿಂದ ಎಸ್ಸಿ-ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಶೇ.60 ರಿಂದ 74.99 ಫಲಿತಾಂಶದೊಂದಿಗೆ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 7 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತಿತ್ತು.

ಇದನ್ನು ಈ ಶೈಕ್ಷಣಿಕ ವರ್ಷದಲ್ಲಿ ರದ್ದು ಮಾಡಲಾಗಿದೆ. ಸರ್ಕಾರ ದುರ್ಬಲ ಸಮುದಾಯಗಳ ಪರವಿರಬೇಕು. ಶೋಷಿತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಉತ್ತೇಜಿಸಲು ಯೋಜನೆಗಳನ್ನು ರೂಪಿಸಬೇಕೇ ವಿನಃ ಈ ಹಿಂದಿನ ಯೋಜನೆಗಳಿಗೆ ಕತ್ತರಿ ಪ್ರಯೋಗ ಮಾಡಬಾರದು. ಇದರಿಂದ ಎಸ್ಸಿ ಹಾಗೂ ಎಸ್ಟಿ ಸಮುದಾಯಗಳ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ ಹಳೆಯ ಆದೇಶವನ್ನು ಮುಂದವರಿಸಬೇಕು ಎಂದು ಒತ್ತಾಯಿಸಿದರು.

ಕಾರ್ಯದರ್ಶಿ ಶಿವಕುಮಾರ್, ಹನುಮಂತ ಮುಕ್ಕುಂಪಿ, ಮೌನೇಶ, ದರ್ಶನ, ಗುನ್ನೆಪ್ಪ, ತಿಮ್ಮಣ್ಣ, ನಿಂಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net