ಕ್ರೀಡೆಗೆ ಉತ್ತೇಜನ ನೀಡಿದರೆ ಮಕ್ಕಳ ಏಳಿಗೆ ಸಾಧ್ಯ

oplus_0
ಅಂತಾರಾಷ್ಟ್ರೀಯ ಮಾಜಿ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಪಾರಿವಾಳವನ್ನು ಹಾರಿ ಬಿಡುವುದರ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ಜೆರಾಲ್ಡ್ ಸಿಕ್ವೇರಾ, ಜೋಜಿ, ಪಳನಿಸ್ವಾಮಿ, ನಮಿತಾ ಅಯ್ಯಪ್ಪ, ಸುನೀಲ್ ಇದ್ದರು.
Published on

ಮಾಜಿ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಅಭಿಮತ

ಸಿದ್ದಾಪುರ : ಸಿದ್ದಾಪುರ ಸಂತ ಅನ್ನಮ್ಮ ಅವರ ಶಾಲೆಯ ವಾರ್ಷಿಕ ಕ್ರೀಡೋತ್ಸವವನ್ನು ಅಂತಾರಾಷ್ಟ್ರೀಯ ಮಾಜಿ ರಗ್ಬಿ ಆಟಗಾರ ಮಾದಂಡ ತಿಮ್ಮಯ್ಯ ಪಾರಿವಾಳ ಹಾರಿ ಬಿಡುವ ಮೂಲಕ ಕ್ರೀಡೋತ್ಸವಕ್ಕೆ ಶುಕ್ರವಾರ ಚಾಲನೆ ನೀಡಿದರು.

ಪ್ರತಿಯೊಬ್ಬ ಮಗುವಿಗೂ ಪಠ್ಯದ ಜತೆ ಪತ್ಯೇತರ ಚಟುವಟಿಕೆಗಳ ಮೂಲಕ ಕ್ರೀಡೆಗೆ ಉತ್ತೇಜನ ನೀಡಿದರೆ ಮಾತ್ರ ಅವರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ನಾವು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿರಲು ಕ್ರೀಡೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಫಾದರ್ ಜೆರಾಲ್ಡ್ ಸಿಕ್ವೇರಾ ಮಾತನಾಡಿ, ಕ್ರೀಡೆಯು ನಮ್ಮ ಮನಸ್ಸನ್ನು ಹಗುರಗೊಳಿಸುತ್ತದೆ. ಜೀವನದಲ್ಲಿ ಸವಾಲುಗಳನ್ನು ಎದುರಿಸಲು ತರಬೇತಿ ನೀಡುತ್ತದೆ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಿ ಆತ್ಮಸ್ಥೆರ್ಯ ಬೆಳೆಸಿಕೊಳ್ಳಬೇಕು. ಸತತ ಪ್ರಯತ್ನದಿಂದ ಶ್ರೇಷ್ಠ ಕ್ರೀಡಾಪಟುಗಳಾಗಿ ಹೊರಹೊಮ್ಮುವ ಗುರಿಯನ್ನು ಹೊಂದಿರಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನವನ್ನು ಮಾಡಿ ಕ್ರೀಡಾಶಿಸ್ತನ್ನು ಪ್ರದರ್ಶಿಸಿದರು. ಕಳೆದ ವರ್ಷ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ದೇಶಪ್ರೇಮ, ಹಾಡು, ಸಂಗೀತ ನೃತ್ಯದ ಮೂಲಕ ಹಲವು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನ ಸೆಳೆಯಿತು.

ಫಾದರ್ ಜೋಜಿ, ಉಪಾಧ್ಯಕ್ಷ ಪಳನಿಸ್ವಾಮಿ, ಲೈನ್ಸ್ ಸಂಸ್ಥೆಯ ನಮಿತಾ ಅಯ್ಯಪ್ಪ, ಸಾಮಾಜಿಕ ಕಾರ್ಯಕರ್ತ ಸುನೀಲ್, ಗ್ರಾಪಂ ಮಾಜಿ ಅಧ್ಯಕ್ಷೆ ರೀನಾ ತುಳಸಿ, ಸಾಮಾಜಿಕ ಕಾರ್ಯಕರ್ತ ರವಿ, ಶಾಲಾ ವ್ಯವಸ್ಥಾಪಕಿ ಸಿಸ್ಟರ್ ಪ್ರಣೀತಾ, ಸಿಸ್ಟರ್ ರೀನಾ, ಸಿಸ್ಟರ್ ಅರ್ಪಿತಾ, ಸಿಸ್ಟರ್ ಶೀಲಾ ಹಾಗೂ ಪಾಲಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net