ಸಿದ್ದಾಪುರಕ್ಕೆ ತಮಿಳುನಾಡಿನಿಂದ 78 ಜನರ ಆಗಮನ, ಶಾಲೆಯಲ್ಲಿ ಕ್ವಾರಂಟೈನ್‌ಗೆ ಗ್ರಾಮಸ್ಥರ ವಿರೋಧ

140520 Siddapura School Quarantine Discus with Villagers
Published on

ಕಾರಟಗಿ: ತಮಿಳುನಾಡಿಗೆ ಕೂಲಿ ಕೆಲಸಕ್ಕೆ ತೆರಳಿದ್ದ ಅಲೆಮಾರಿ ಜನಾಂಗದ 78 ಜನರು ತಾಲೂಕಿನ ಸಿದ್ದಾಪುರ ಗ್ರಾಮಕ್ಕೆ ಬುಧವಾರ ಮಧ್ಯರಾತ್ರಿ ಆಗಮಿಸಿದ್ದು, ಅವರನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕ್ವಾರಂಟೈನ್ ಮಾಡಲು ಗ್ರಾಮಸ್ಥರು ಗುರುವಾರ ವಿರೋಧ ವ್ಯಕ್ತಪಡಿಸಿದರು.

ಕರೊನಾ ಮಹಾಮಾರಿಯಿಂದ ಸಾರ್ವಜನಿಕರು ಭಯಭೀತರಾಗಿದ್ದು, ಯಾವುದೇ ಕಾರಣಕ್ಕೂ ಹೊರ ರಾಜ್ಯದಿಂದ ಆಗಮಿಸಿದವರನ್ನು ಗ್ರಾಮದಲ್ಲಿ ಕ್ವಾರಂಟೈನ್ ಮಾಡಲು ಸಾಧ್ಯವಿಲ್ಲ. ಸಾರ್ವಜನಿಕರು ನಿತ್ಯ ಶಾಲೆಯ ಬಳಿ ಸಂಚರಿಸುತ್ತಾರೆ. ಚಿಕ್ಕ ಮಕ್ಕಳು ಓಡಾಟ ನಡೆಸುವುದರಿಂದ ಕ್ವಾರಂಟೈನ್ ಮಾಡುವುದು ಸಾಧ್ಯವಿಲ್ಲ ಎಂದರು. ಈ ವೇಳೆ ಅಲೆಮಾರಿ ಜನಾಂಗದವರಿಗೂ ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ ನಡೆಯಿತು. ಪೊಲೀಸ್ ಇಲಾಖೆ ಅಧಿಕಾರಿಗಳು ರಾತ್ರಿ ವೇಳೆ ಸ್ಥಳಕ್ಕಾಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಬಳಿಕ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಶಾಮಿಯಾನ ಹಾಕಿ ಅಲ್ಲಿಯೇ ತಂಗಲು ವ್ಯವಸ್ಥೆ ಮಾಡಲಾಯಿತು. ಬಳಿಕ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಬುದ್ದನಂದಾ ಅವರು ಪ್ರತಿಯೊಬ್ಬರನ್ನು ಪರೀಕ್ಷಿಸಿ, ಹೆಸರು ದಾಖಲಿಸಿಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net