ಆನೆ ಕಾಡಿಗಟ್ಟುವ ಕಾರ್ಯಾಚರಣೆ ಯಶಸ್ವಿ

ಚಿತ್ರ 07ಎಸ್ ಡಿ ಪಿ 02
Published on

ಸಿದ್ದಾಪುರ: ವಿರಾಜಪೇಟೆ ಮತ್ತು ತಿತಿಮತಿ ಅರಣ್ಯ ವಲಯ ವ್ಯಾಪ್ತಿಯ ಕಳತ್ಮಾಡು, ಕೈಕೇರಿ, ಹೊಸಕೋಟೆ, ನಲ್ವತೋಕ್ಲು, ಕೆ.ಬೈಗೋಡು, ಹೊಸೂರು, ಹಾತೂರು, ಪುಲಿಯೇರಿ ಗ್ರಾಮಗಳಲ್ಲಿ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದ್ದ ಆನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ಮಂಗಳವಾರ ನಡೆಯಿತು.

ಕಾರ್ಯಾಚರಣೆ ಬಗ್ಗೆ ಮೊದಲೇ ಕಾರ್ಮಿಕರಿಗೆ ಮಾಹಿತಿ ನೀಡಲಾಗಿತ್ತು. ಕಾಫಿ ತೋಟಗಳ ಮಾರ್ಗದಲ್ಲಿ ತೆರಳಿದ ಅರಣ್ಯ ಇಲಾಖೆಯ 15ಕ್ಕೂ ಹೆಚ್ಚು ಸಿಬ್ಬಂದಿ, ಗ್ರಾಮಗಳಲ್ಲಿ ಬೀಡುಬಿಟ್ಟು ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಮೂಡಿಸುತ್ತಿದ್ದ 9 ಕಾಡಾನೆಗಳ ಹಿಂಡನ್ನು ಪಟಾಕಿ ಸಿಡಿಸುವುದರ ಮೂಲಕ ಹಿಂಬಾಲಿಸಿ ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾದರು.

ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶರಣ್ ಬಸಪ್ಪ, ವಲಯ ಅರಣ್ಯಾಧಿಕಾರಿ ಕಳ್ಳಿರ ಎಂ.ದೇವಯ್ಯ, ಉಪ ವಲಯ ಅರಣ್ಯಾಧಿಕಾರಿ ಸಂಜಿತ್ ಸೋಮಯ್ಯ, ಆರ್‌ಆರ್‌ಟಿ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net