

ಸಿದ್ದಾಪುರ: ಪಟ್ಟಣದ ನೆಹರೂ ಮೈದಾನದಲ್ಲಿ ಲ್ಲಿ ಫೆ. 8 ಹಾಗೂ 9ರಂದು ಸಿದ್ದಾಪುರ ಉತ್ಸವ ಆಯೋಜಿಸಲಾಗಿದೆ ಎಂದು ಉತ್ಸವ ಸಮಿತಿ ಅಧ್ಯಕ್ಷ ಕೆ.ಜಿ ನಾಯ್ಕ ಹಣಜೀಬೈಲ್ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಉತ್ಸವ ನಡೆಸಲಾಗುತ್ತಿದೆ. ತಾಲೂಕಿನಲ್ಲಿ ಜಾತ್ರೆ, ಉತ್ಸವಗಳು ಜರುಗುತ್ತಿರುವುದರಿಂದ 3 ದಿನಗಳ ಉತ್ಸವವನ್ನು 2ದಿನಕ್ಕೆ ಸೀಮಿತಗೊಳಿಸಲಾಗಿದೆ ಎಂದರು.
ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭಗಳಿಗೆ ಸ್ವಾಮೀಜಿಗಳು, ಜಿಲ್ಲೆಯ ಸಂಸದರು, ಶಾಸಕರು ಸೇರಿದಂತೆ ಅನೇಕ ಗಣ್ಯರನ್ನು ಆಹ್ವಾನಿಸಲಾಗುವುದು. ತಾಲೂಕಿನ ಜನ ಉತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಕಾರ್ಯಾಧ್ಯಕ್ಷ ಸತೀಶ್ ಹೆಗಡೆ ಬೈಲಳ್ಳಿ, ಉಪಾಧ್ಯಕ್ಷ ಅನಿಲ್ ದೇವನಳ್ಳಿ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡರ್, ಸುರೇಶ್ ಮೇಸ್ತಾ, ರವಿಕುಮಾರ್ ನಾಯ್ಕ, ವಿನಯ್ ಹೊನ್ನೆಗುಂಡಿ ಹಾಗೂ ಉತ್ಸವ ಸಮಿತಿ ಪದಾಧಿಕಾರಿಗಳಿದ್ದರು.