ಸಿದ್ದಾಪುರ ಶ್ರೀ ವೀರಭದ್ರೇಶ್ವರ ಜಾತ್ರೋತ್ಸವ ಅದ್ದೂರಿ

08082022 SIDDAPUR FAIR
Published on

ಸಿದ್ದಾಪುರ: ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವರ ಜಾತ್ರೋತ್ಸವ ಸೋಮವಾರ ಅದ್ದೂರಿಯಾಗಿ ಜರುಗಿತು. ದೇವಸ್ಥಾನದಲ್ಲಿ ಬೆಳಗ್ಗೆ ವೀರಭದ್ರೇಶ್ವರ ಮೂರ್ತಿಗೆ ಬಿಲ್ವಾರ್ಚನೆ, ರುದ್ರಾಭಿಷೇಕ, ನಾನಾ ಬಗೆಯ ಪುಷ್ಪಗಳಿಂದ ಅಲಂಕಾರ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ವಿವಿಧ ವಾದ್ಯಮೇಳಗಳೊಂದಿಗೆ ಗಂಗೆಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಲಾಯಿತು. ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಮುತ್ತೈದೆಯರು ಕುಂಭಹೊತ್ತು ಪಾಲ್ಗೊಂಡಿದ್ದರು. ಮಧ್ಯಾಹ್ನ ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಕೊಟ್ನೇಕಲ್, ಬರಗೂರು, ನಂದಿಹಳ್ಳಿ, ಕಾರಟಗಿ, ಗುಂಡೂರು, ಶ್ರೀರಾಮನಗರ, ಗಂಗಾವತಿ ಸೇರಿ ಇತರ ಗ್ರಾಮಗಳ ಭಕ್ತರು ಜಾತ್ರೆಗೆ ಆಗಮಿಸಿ, ದೇವರ ಕೃಪೆಗೆ ಪಾತ್ರರಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net