ಸಿದ್ದರಾಮಯ್ಯ ಕೆಳಗಿಳಿಸಲು ಆಗದು

IMG20240831201022.jpg
Published on

ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಪ್ರಕರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ಕೆಡವಲು ಎಷ್ಟೇ ಪ್ರಯತ್ನಿಸಿದರೂ ಯಶಸ್ವಿಯಾಗುವುದಿಲ್ಲ ಎಂದು ಶಾಸಕ ಆಸೀಫ್ ಶೇಠ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಎಲ್ಲ ಶಾಸಕರು, ಸಚಿವರು ಸಿಎಂ ಸಿದ್ದರಾಮಯ್ಯ ಪರವಾಗಿದ್ದಾರೆ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದರು.

ಸಿಎಂ ಪ್ರಾಸಿಕ್ಯೂಷನ್‌ಗೆ ಸಂಬಂಧಿಸಿದಂತೆ ರಾಜ್ಯಪಾಲರ ನೀತಿಯನ್ನು ಕಾಂಗ್ರೆಸ್ ಖಂಡಿಸುತ್ತದೆ ಎಂದರು.

ರಸ್ತೆ ಅಗಲೀಕರಣದ ಭೂ ಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿಂದತೆ ಬೆಳಗಾವಿ ಮಹಾನಗರ ಪಾಲಿಕೆಯ 20 ಕೋಟಿ ರೂ. ನೀಡುವ ಸಂದರ್ಭ ಬಂದಿದೆ. ಈ ವೇಳೆ ಯಾವುದೇ ಅಧಿಕಾರಿಗಳ ಸಂಬಳ ನಿಲ್ಲಿಸುವುದಿಲ್ಲ. ಭೂ-ಸ್ವಾಧೀನ ಪ್ರಕರಣದಲ್ಲಿ ಯಾವ ಅಧಿಕಾರಿಗಳಿಂದ ಪ್ರಮಾದ ಆಗಿದೆ ಎಂದು ತಿಳಿದುಕೊಳ್ಳಲು ಜಿಲ್ಲಾಧಿಕಾರಿ ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಕಾನೂನು ಹೋರಾಟ ನಡೆಯಲಿದೆ. ನಗರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ನಗರೋತ್ಥಾನ ಇಲಾಖೆಯಿಂದ ಮಹಾನಗರ ಪಾಲಿಕೆಗೆ ಶೀಘ್ರದಲ್ಲೇ 125 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.

ಬೆಳಗಾವಿಯಲ್ಲಿ ಹೆಚ್ಚಿತ್ತಿರುವ ಸರಗಳ್ಳತನ ತಡೆಯಲು ಕ್ರಮ ಕೈಗೊಳ್ಳಲಾಗುವುದು. ನಗರದಲ್ಲಿ ಕತ್ತಲಿನಿಂದ ಕೂಡಿದ ಪ್ರದೇಶಗಳಲ್ಲಿ ಬೀದಿದೀಪಗಳನ್ನು ಅಳವಡಿಸಲು ಮಹಾನಗರ ಪಾಲಿಕೆ ಮತ್ತು ಹೆಸ್ಕಾಂಗೆ ಸೂಚಿಸಲಾಗಿದೆ. ಬೆಳಗಾವಿ ಪೊಲೀಸರು ಕಳ್ಳರನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net