ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜಯವಾಗಲಿ: ಅಭಿಮಾನಿಗಳ ಘೋಷಣೆ

1130732
Published on

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಅಭಿಮಾನಿಗಳು ಜೈಕಾರ ಕೂಗಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ.

ಮುಂದಿನ ಸಿಎಂ ಯಾರು ಎಂಬ ಬಗ್ಗೆ ಕಾಂಗ್ರೆಸ್​ನಲ್ಲಿ ತೀವ್ರ ವಿವಾದ ಸೃಷ್ಟಿ ಆಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಕಂದಕ ನಿರ್ಮಾಣ ಆಗಿದ್ದರೂ, ಸಿದ್ದು ಬೆಂಬಲಿಗರು ತಮ್ಮ ಪಟ್ಟು ಬಿಡುವಂತೆ ಕಾಣುತ್ತಿಲ್ಲ.

ಹರಿಹರ ಶಾಸಕ ಎಸ್. ರಾಮಪ್ಪನವರ ಮಗಳ ಮದುವೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಆಗಮಿಸಿದ್ದರು. ಕಲ್ಯಾಣ ಮಂಟಪಕ್ಕೆ ಸಿದ್ದರಾಮಯ್ಯ ಬರುತ್ತಿದ್ದಂತೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜಯವಾಗಲಿ ಎಂದು ಅಭಿಮಾನಿಗಳು ಜೈಕಾರ ಕೂಗಿದರು.

ಇದಾದ ಬಳಿಕ ಸಿದ್ದರಾಮಯ್ಯ ಅವರು ನವ-ವಧುವರರಿಗೆ ಶುಭಹಾರೈಸಿ, ಆಶೀರ್ವದಿಸಿದರು. ಆದರೆ, ಶಾಸಕರ ಮಗಳ ಮದುವೆ ಸಂಭ್ರಮದಲ್ಲಿ ಸಾಮಾಜಿಕ ಅಂತರ ಕಾಣೆಯಾಗಿತ್ತು. ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ ನೂಕುನುಗ್ಗಲು ಹೆಚ್ಚಾಯಿತು.

ಮದುವೆ ಸಮಾರಂಭದಲ್ಲಿ 50ಕ್ಕೂ ಹೆಚ್ಚು ಮಂದಿ ಭಾಗಿಯಾಗುವ ಮೂಲಕ ಕೋವಿಡ್ ನಿಯಮ‌ ಉಲ್ಲಂಘಿಸಲಾಗಿತ್ತು. ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ತಾಲೂಕು ಹಾಗೂ ಜಿಲ್ಲಾಡಳಿತ ವೈಫಲ್ಯ ಎದ್ದು ಕಾಣುತ್ತಿತ್ತು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net