ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಸಲ್ಲ

6LNG01
Published on

ಲಿಂಗಸುಗೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ, ಜೆಡಿಎಸ್ ನಾಯಕರು ಷಡ್ಯಂತ್ರ ರೂಪಿಸಿವೆ ಎಂದು ಆರೋಪಿಸಿ ಬ್ಲಾಕ್ ಕಾಂಗ್ರೆಸ್ ಮತ್ತು ಅಹಿಂದ ಒಕ್ಕೂಟದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ದೊಡ್ಡ ಹನುಮಂತ ದೇವಸ್ಥಾನ ಮುಂಭಾಗದಿಂದ ಎಸಿ ಕಚೇರಿವರೆಗೆ ಮೆರವಣಿಗೆ ನಡೆಸಿ ಎಸಿ ಕಚೇರಿ ಎಫ್‌ಡಿಸಿ ಆದಪ್ಪಗೆ ಮನವಿ ಸಲ್ಲಿಸಿದರು. ಕಳೆದ ನಾಲ್ಕು ದಶಕಗಳಿಂದ ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣ ಕುರಿತು ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಈ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆಯಿಂದ ತಿಳಿದುಬರಲಿದೆ ಎಂದರು.

ಮುಡಾ ಕುರಿತ ಆರೋಪಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ದಾಖಲೆ ಸಹಿತ ಉತ್ತರ ನೀಡಿದ್ದಾರೆ. ಆದರೂ, ಸಿಎಂ ವಿರುದ್ಧ ಬಿಜೆಪಿ, ಜೆಡಿಎಸ್ ರಾಜಕೀಯ ಪಿತೂರಿ ನಡೆಸುತ್ತಿರುವುದು ಖಂಡನೀಯ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net