ಮಹಿಷ ದಸರಾ ಕುರಿತು ತಮ್ಮ ನಿಲುವು ತಿಳಿಸಿದ ಸಿದ್ದರಾಮಯ್ಯ

siddaramaiah
Published on

ಮೈಸೂರು: ಖಾಸಗಿ ಸಂಘ ಸಂಸ್ಥೆಗಳು ನಡೆಸಲು ಉದ್ದೇಶಿಸಿರುವ ಮಹಿಷ ದಸರಾ ಕುರಿತು ಜಿಲ್ಲಾಡಳಿತ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಈ ಹಿಂದೆ ಮಹಿಷಾ ದಸರಾ ಆಚರಿಸಿಲ್ಲ, ಮುಂದೆಯೂ ಮಾಡುವುದಿಲ್ಲ. ಖಾಸಗಿ ಸಂಘ ಸಂಸ್ಥೆಗಳು ಮಹಿಷ ದಸರಾವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಆದರೆ, ಅವರು ಚಾಮುಂಡಿಬೆಟ್ಟದಲ್ಲಿ ಮಹಿಷ ದಸರಾ ಆಚರಿಸಲಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net