ಬಸವ ಪ್ರತಿಮೆಗೆ ಸಿದ್ದರಾಮಯ್ಯ ಪುಷ್ಪಾರ್ಚನೆ

6
Published on

ಮೈಸೂರು: ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವ ಜಯಂತಿ ಹಾಗೂ ಶ್ರೀಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಷನೆ ನೆರವೇರಿಸಿದರು.
ತಮಿಳುನಾಡಿನಿಂದ ನಗರಕ್ಕೆ ಆಗಮಿಸಿದ ಅವರು, ಅರಮನೆ ಬಳಿ ಇರುವ ಶ್ರೀ ಡಾ.ಶಿವರಾತ್ರಿ ರಾಜೇಂದ್ರ (ಗನ್‌ಹೌಸ್) ವೃತ್ತದಲ್ಲಿರುವ ಶ್ರೀಬಸವೇಶ್ವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ನಮಿಸಿದರು.
ಸುತ್ತೂರು ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಕೆ.ಹರೀಶ್‌ಗೌಡ, ಗಣೇಶ್‌ಪ್ರಸಾದ್, ಎಂಎಲ್‌ಸಿ ಡಾ.ಕೆ.ತಿಮ್ಮಯ್ಯ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್, ಮುಡಾ ಅಧ್ಯಕ್ಷ ಕೆ.ಮರೀಗೌಡ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂನ್‌ಖಾನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net