

ಮಡಿಕೇರಿ: ಸಮಾನತೆಯ ಹರಿಕಾರ, ಅಭಿವೃದ್ಧಿಯ ಗುರಿಕಾರ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸ್‌ರವರ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಳಿತ ನಡೆಸುತ್ತಿದ್ದಾರೆ ಎಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಬಣ್ಣಿಸಿದರು.
ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಕಾಂಗ್ರೆಸ್ ಹಿಂದುಳಿದ ಘಟಕದ ಸಂಯೋಗದಲ್ಲಿ ಆಯೋಜಿಸಲಾಗಿದ್ದ ದೇವರಾಜ್ ಅರಸ್‌ರವರ ೧೦೮ನೇ ಮತ್ತು ರಾಜೀವ್ ಗಾಂಧಿ ಯವರ ೭೯ನೇ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಇಬ್ಬರು ನಾಯಕರು ತಾವು ನೀಡಿದ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಧ್ಯೇಯದ ಆಡಳಿತ ಎಲ್ಲಾ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ. ತಾನು ಕೂಡ ಬಡವರ, ಶೋಷಿತರ, ದಮನಿತರ ಪರವಾಗಿ ಧ್ವನಿಯಾಗಿ ಇರುತ್ತೇನೆ ಎಂದು ಭರವಸೆ ನೀಡಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ನವರು ಮಾತನಾಡಿ, ದೇಶದ ಪ್ರಧಾನಿ ಹೇಗಿರಬೇಕು. ರಾಜ್ಯದ ಮುಖ್ಯ ಮಂತ್ರಿ ಹೇಗಿರಬೇಕು ಎಂಬುದಕ್ಕೆ ರಾಜೀವ್ ಗಾಂಧಿ ಮತ್ತು ದೇವರಾಜ್‌ರವರು ಮಾದರಿಯಾಗಿದ್ದಾರೆ. ಅರಸುರವರು ಸಮಾಜದಲ್ಲಿ ಕ್ರಾಂತಿ ಮಾಡಿದ್ದರೆ ರಾಜೀವ್ ಗಾಂಧಿ ಅಭಿವೃದ್ಧಿಯ ಕ್ರಾಂತಿ ಮಾಡಿದರು ಎಂದು ಬಣ್ಣಿಸಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಹಿಂದುಳಿದ ಘಟಕದ ಅಧ್ಯಕ್ಷ ಬಾನಂಡ ಪ್ರಥ್ಯು, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಕೆಪಿಸಿಸಿ ಪ್ರಮುಖರಾದ ಟಿ.ಪಿ.ರಮೇಶ್, ಯಾಕುಬ್, ಕೆ.ಕೆ.ಮಂಜುನಾಥ್ ಕುಮಾರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್ ಇತರರು ಉಪಸ್ಥಿತರಿದ್ದರು.