ಸಿದ್ದರಾಮಯ್ಯ ವಿರುದ್ದ ಹರಿಪ್ರಸಾದ್​ ವಾಗ್ದಾಳಿ; ಜನರಲ್​ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲವೆಂದ ಸಿಎಂ

siddaramaiah
Published on

ಹುಬ್ಬಳ್ಳಿ: ತಮ್ಮ ಹೆಸರೇಳದೆ ಬಹಿರಂಗವಾಗೊ ವಾಗ್ದಾಳಿ ನಡೆಸಿರುವ ವಿಧಾನಪರಿಷತ್​ ಸದಸ್ಯ ಬಿ.ಕೆ. ಹರಿಪ್ರಸಾದ್​ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಜನರಲ್​ ಸ್ಟೇಟ್​ಮೆಂಟ್​ಗಳ ಬಗ್ಗ ನಾನು ಮಾತನಾಡುವುದಿಲ್ಲ ಎಂದಿದ್ದಾರೆ.

ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಮೊದಲಿಗೆ ಅವರು ನನ್ನ ಹೆಸರು ಪ್ರಸ್ತಾಪಿಸಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ನಂತರ ನಾನು ಈ ರೀತಿಯ ಜನರಲ್​ ಸ್ಟೇಟ್​ಮೆಂಟ್​ಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ.

BK Hariprasad Siddaramaiah

ತಮನ್ನು ಸಚಿವನನ್ನಾಗಿ ಮಾಡಲಿಲ್ಲ ಎಂಬ ಕಾರಣಕ್ಕೆ ಸ್ವಪಕ್ಷ ಕಾಂಗ್ರೆಸ್​ ವಿರುದ್ದ ತೀವ್ರ ಅಸಮಾಧಾನ ಹೊಂದಿರುವ ವಿಧಾನಪರಿಷತ್​ ಸದಸ್ಯ ಬಿ.ಕೆ. ಹರಿಪ್ರಸಾದ್​ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರೇಳದೆ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು.

ಸಮಾನ ಮನಸ್ಕರ ಪೂರ್ವಭಾವಿ ಸಭೆಯನ್ನುದ್ಧೇಶಿಸಿ ಮಾತನಾಡಿದ ಹರಿಪ್ರಸಾದ್​ ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು ಎಂದು ವ್ಯಂಗ್ಯಭರಿತವಾಗಿ ತ,ಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net