

ಮಡಿಕೇರಿ:
ಕೊಡಗು - ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಪರ ಪ್ರಚಾರಕ್ಕೆ ಭಾನುವಾರ (ಏ.14) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಡಿಕೇರಿಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.
ಅಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 3 ಗಂಟೆ ತನಕ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಸಚಿವರಾದ ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಸ್ಥಳೀಯ ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ ಹಾಗೂ ಅಭ್ಯರ್ಥಿ ಲಕ್ಷö್ಮಣ್ ಭಾಗವಹಿಸುವರು. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಚ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜನಪ್ರಿಯ ಸರ್ಕಾರ ಅನ್ನಿಸಿಕೊಂಡಿದೆ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಸಮಾವೇಶದಲ್ಲಿ ನೀಡಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ. ಪಿ. ರಮೇಶ್ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಲಕ್ಷö್ಮಣ್ ಪರ ಜಿಲ್ಲೆಯಾದ್ಯಂತ ಅಬ್ಬರದ ಪ್ರಚಾರ ನಡೆಸಲಾಗುತ್ತಿದೆ. ಸೋಮವಾರಪೇಟೆ, ಕುಶಾಲನಗರ ಹಾಗೂ ಪೊನ್ನಂಪೇಟೆ ಬ್ಲಾಕ್‌ನಲ್ಲಿ ಈಗಾಗಲೇ ಪ್ರಚಾರ ನಡೆದಿದೆ. ಮಡಿಕೇರಿ ನಗರ, ಮಡಿಕೇರಿ ಹಾಗೂ ವಿರಾಜಪೇಟೆ ಬ್ಲಾಕ್‌ನಲ್ಲಿ ಪ್ರಚಾರ ಕಾರ್ಯ ಇನ್ನಷ್ಟೇ ನಡೆಯಬೇಕಿದೆ. ಮತದಾರರ ನಿರೀಕ್ಷೆ ಕಾಂಗ್ರೆಸ್ ಪರ ಇದೆ. ವಿಧಾನಸಭಾ ಚುನಾವಣೆ ಸಂದರ್ಭ ಗ್ಯಾರಂಟಿ ಕಾರ್ಡ್ ಹಂಚುವ ಮೂಲಕ ಮೂಲಕ ಪ್ರಚಾರ ನಡೆಸಲಾಗಿತ್ತು. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಶಾಸಕರು ಗೆಲುವು ಸಾಧಿಸಿದ್ದಾರೆ. ಇಬ್ಬರೂ ಶಾಸಕರು ಕೇವಲ 9 ತಿಂಗಳ ಅವಧಿಯಲ್ಲಿ ಜಿಲ್ಲೆಗೆ 500 ಕೋಟಿ ಅನುದಾನ ರೂ. ಅನುದಾನ ತಂದಿದ್ದಾರೆ. ಈ ಅಭಿವೃದ್ಧಿ ಕಾರ್ಯ ಮುಂದುವರಿಯಲಿದೆ.
ಕೇಂದ್ರದಲ್ಲೂ 25 ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವುದು. ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸಹಿ ಮಾಡಿದ ಗ್ಯಾರಂಟಿ ಕಾರ್ಡ್ ವಿತರಿಸಲಾಗುವುದು. ರಾಜ್ಯದ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಸರ್ಕಾರದ ಋಣ ತೀರಿಸಲು ಕಾಂಗ್ರೆಸ್‌ಗೆ ಮತ ಹಾಕಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಪ್ರಮುಖರಾದ ಮುನೀರ್ ಅಹಮ್ಮದ್, ಭವಿನ್ ಕುಮಾರ್ ಇದ್ದರು.