ಮೂಡೂರು ಪಡೂರು ಕಂಬಳಕ್ಕೆ ಸಿದ್ದರಾಮಯ್ಯ: ಬಿ.ರಮಾನಾಥ ರೈ ಮಾಹಿತಿ

Btw_Kambal
Published on

ಬಂಟ್ವಾಳ: ಮೂಡೂರು ಪಡೂರು ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ನಡೆಯಲಿರುವ 14ನೇ ವರ್ಷದ ಹೊನಲು ಬೆಳಕಿನ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆಯನ್ನು ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಕಂಬಳ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಬಿಡುಗಡೆಗೊಳಿಸಿದರು.

ಕಂಬಳ ಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಸಚಿವ ಸಂಪುಟದ ಮಂತ್ರಿಗಳು ಆಗಮಿಸಲಿದ್ದಾರೆ. ಮೂಡೂರು ಪಡೂರು ಕಂಬಳ ಜಿಲ್ಲೆಯಲ್ಲಿಯೇ ಅತ್ಯಂತ ವಿಶಿಷ್ಟವಾಗಿದ್ದು, ಈ ಬಾರಿ ಮುಖ್ಯಮಂತ್ರಿ ಆಗಮನ ವೈಶಿಷ್ಟೃನ್ನು ಇಮ್ಮಡಿಗೊಳಿಸಲಿದೆ. ಮಾ.8ರಂದು ಕ್ಯಾಬಿನೆಟ್ ಸಭೆಯೂ ಇದ್ದು, ಅದನ್ನು ಮುಗಿಸಿ ಇಲ್ಲಿಗೆ ಆಗಮಿಸಲು ಮುಖಮಂತ್ರಿ ಸಿದ್ದರಾಮಯ್ಯ ಒಪ್ಪಿದ್ದಾರೆ. ಅವರೊಂದಿಗೆ ಕ್ಯಾಬಿನೆಟ್‌ನ ಮಂತ್ರಿಗಳು ಆಗಮಿಸಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ಕಂಬಳ ಸಮಿತಿ ಕಾರ್ಯಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪ್ರಮುಖರಾದ ಬೇಬಿ ಕುಂದರ್, ಬಾಲಕೃಷ್ಣ ಅಂಚನ್, ರಾಜೀವ ಶೆಟ್ಟಿ ಎಡ್ತೂರು, ಚಂದ್ರಶೇಖರ ಭಂಡಾರಿ, ಸುದೀಪ್ ಕುಮಾರ್ ಶೆಟ್ಟಿ, ಸುದರ್ಶನ ಜೈನ್, ಪದ್ಮನಾಭ ರೈ, ಶಬೀರ್, ವೆಂಕಪ್ಪ ಪೂಜಾರಿ, ಅಬ್ಬಾಸ್ ಆಲಿ, ಸಿದ್ದೀಕ್ ಗುಡ್ಡೆಯಂಗಡಿ, ಮಹಮ್ಮದ್ ಶರೀಫ್, ರಾಮಕೃಷ್ಣ ಆಳ್ವ, ಬಿ.ಮೋಹನ್, ದೇವಪ್ಪ ಕುಲಾಲ್ ಪಂಜಿಕಲ್ಲು, ಸದಾಶಿವ ಬಂಗೇರ, ಉಮೇಶ್ ನಾವೂರ, ಮಹಮ್ಮದ್ ನಂದಾವರ, ರಾಜೀವ ಕಕ್ಯೆಪದವು, ಸುರೇಶ್ ಕುಮಾರ್ ನಾವೂರ, ರಾಜೇಶ್ ರೋಡ್ರಿಗಸ್, ಸೀತಾರಾಮ ಶೆಟ್ಟಿ ಕಾಂತಾಡಿ, ಹರೀಶ್ ಅಜ್ಜಿಬೆಟ್ಟು, ಸುದರ್ಶನ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net