ಬಾದಾಮಿಯಿಂದ ಮುಂದೆ ಎಲ್ಲಿಗೆ ಹೋಗಬೇಕಾಗುತ್ತೊ ಸಿದ್ದರಾಮಯ್ಯ

MLC1
Published on

ತುಮಕೂರು: ಮಾಜಿ ಸಿಎಂ ಸಿದ್ದರಾಮಯ್ಯ ಮನಸೋ ಇಚ್ಛೆ ಹೇಳಿಕೆ ನೀಡಿದಿದ್ದರಿಂದ ಮೈಸೂರು ಬಿಟ್ಟು ಬಾದಾಮಿಗೆ ಹೋಗಬೇಕಾಯಿತು. ಈ ವರಸೆ ಹೀಗೆ ಮುಂದುವರೆದರೆ ಬಾದಾಮಿಯಿಂದ ಮುಂದೆ ಎಲ್ಲಿಗೆ ಹೋಗಬೇಕಾಗುತ್ತದೋ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಚಿದಾನಂದ್ ಎಂ.ಗೌಡ ಜತೆ ಸಿದ್ದಗಂಗಾಮಠಕ್ಕೆ ಇಂದು ಭೇಟಿಕೊಟ್ಟಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕಸಿದ್ದರಾಮಯ್ಯ ಈ ವರ್ಷ ಶಾಲೆ ತೆರೆಯದಿದ್ದರೆ ಪ್ರಳಯವೇನು ಆಗೋಲ್ಲ ಅಂತ ಹೇಳಿರುವುದಕ್ಕೆ ಸಿದ್ದರಾಮಯ್ಯ ಸಿಎಂ ಆಗಿದ್ದವರು. ಶಿಕ್ಷಣ ತಜ್ಞರು, ಪೋಷಕರು ಸೇರಿದಂತೆ ಎಲ್ಲರ ಜತೆ ಸಮಾಲೋಚನೆ ನಡೆಸಿ, ಎಲ್ಲದರ ಬಗ್ಗೆ ಚಿಂತನೆ ನಡೆಸಿ ಹೇಳಿಕೆ ನೀಡಬೇಕು. ಈ ರೀತಿ ಮನಬಂದಂತೆ ಹೇಳಿ ಕೊಡಬಾರದು ತಿರುಗೇಟು ಕೊಟ್ಟರು.

ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಪೋಷಕರು, ಶಿಕ್ಷಣ ತಜ್ಞರ ಜತೆ ಸಮಾಲೋಚನೆ ನಡೆಸಿದ ಬಳಿಕ ಶಾಲೆಗಳನ್ನು ತೆರೆಯಲು ಸಿಎಂ ಯಡಿಯೂರಪ್ಪ ಕ್ರಮ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net