ಸಿದ್ದರಾಮಯ್ಯನವರ ಅರ್ಥಶಾಸ್ತ್ರ ವಿಫಲ; ಶಾಸಕ ಯತ್ನಾಳ

BJP PROTEST MLA YATNAL LEAD
ವಿಜಯಪುರ ನಗರದಲ್ಲಿ ಬಿಜೆಪಿ ನಗರ ಮಂಡಲ ನೇತೃತ್ವದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟಿಸಲಾಯಿತು. ಶಾಸಕ ಬಸನಗೌಡ ಪಾಟೀಲ ಯತ್ನಾಳ, ಆರ್.ಎಸ್. ಪಾಟೀಲ ಕೂಚಬಾಳ, ಕಾಸುಗೌಡ ಬಿರಾದಾರ ಮತ್ತಿತರರಿದ್ದಾರೆ.
Published on

ವಿಜಯಪುರ: ಸಿಎಂ ಸಿದ್ದರಾಮಯ್ಯನ ಅರ್ಥಶಾಸ್ತ್ರ ಸಂಪೂರ್ಣ ವಿಫಲವಾಗಿದೆ. ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲಾಗದೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮೂಲಕ ಜನರನ್ನು ಆರ್ಥಿಕ ದುಃಸ್ಥಿತಿಗೆ ತಳ್ಳಿದ್ದಾರೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹರಿಹಾಯ್ದರು.

ನಗರದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಶನಿವಾರ ಬಿಜೆಪಿ ನಗರ ಮಂಡಲ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಒಂದು ಕೈಯಲ್ಲಿ ಕೊಟ್ಟಂತೆ ಮಾಡಿ ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುವ ಹುನ್ನಾರ ನಡೆಸಿದೆ. ಜನನ-ಮರಣ ಪ್ರಮಾಣ ಪತ್ರಕ್ಕೂ ದರ ನಿಗದಿಗೊಳಿಸಿದೆ. ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಪ್ರತಿಯೊಂದು ವಸ್ತುಗಳ ಬೆಲೆ ಗಗನಕ್ಕೇರಲಿವೆ. ಈ ರೀತಿ ಬೆಲೆ ಏರಿಕೆ ಮೂಲಕ ಸರ್ಕಾರ ಹಗಲು ದರೋಡೆ ನಡೆಸಿದೆ. ಇದರಿಂದ ಜನಸಾಮಾನ್ಯರ ಜೀವನ ಸಂಕಷ್ಟಕ್ಕೆ ಸಿಲುಕಲಿದೆ. ಕೂಡಲೇ ಇಂಧನ ದರ ಏರಿಕೆ ನಿರ್ಧಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ತಮ್ಮ ಸ್ವಾರ್ಥಕ್ಕಾಗಿ ಜಾರಿಗೆ ತಂದಿರುವ ಯೋಜನೆಗಳೆಲ್ಲ ಸಂಪೂರ್ಣ ವಿಫಲವಾಗಿವೆ. ಅಕ್ಕಿ ಬದಲಾಗಿ ಸರಿಯಾಗಿ ಹಣ ನೀಡುತ್ತಿಲ್ಲ. ಬಸ್ ಗಳಲ್ಲಿ ದಿನಾಲು ಸೀಟಿಗಾಗಿ ಹೊಡೆದಾಟ ಸಾಮಾನ್ಯವಾಗಿದೆ. ಇದರಿಂದ ಸಿದ್ದರಾಮಯ್ಯನವರ ಅರ್ಥಶಾಸ್ತ್ರ ಸಂಪೂರ್ಣ ವಿಫಲವಾಗಿದೆ ಎಂಬುದು ಸ್ಪಷ್ಟವಾಗುತ್ತದೆ. ರಾಜ್ಯದ ಖಜಾನೆ ಖಾಲಿ ಆಗಿದ್ದು, ಗ್ಯಾರಂಟಿಗಳನ್ನು ಏಕಾಏಕಿ ತೆಗೆದು ಹಾಕಿದರೆ ಎಲ್ಲ ಜನ ಛೀಮಾರಿ ಹಾಕುತ್ತಾರೆ ಎಂಬ ಭಯ ಕಾಡುತ್ತಿದೆ. ಹೀಗಾಗಿ ಮುಂದುವರೆಸುವ ನಾಟಕ ನಡೆಸಿದ್ದು, ಅಭಿವೃದ್ಧಿ ಮಾತ್ರ ಶೂನ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಮಾತನಾಡಿ, ಕಾಂಗ್ರೆಸ್ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿ ಜನರ ಜೀವನದ ಜೊತೆ ಚಲ್ಲಾಟವಾಡುತ್ತಿದೆ. ಸದಾ ಒಂದಿಲ್ಲೊಂದರ ದರ ಏರಿಕೆ ಮಾಡಿ ಲೂಟಿಗೆ ಇಳಿದಿದೆ ಎಂದು ದೂರಿದರು.

ಮುಖಂಡರಾದ ಕಾಸುಗೌಡ ಬಿರಾದಾರ, ಸಂಜೀವ ಐಹೊಳೆ, ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಎಸ್‌ಸಿ ಮೋರ್ಚಾ ಅಧ್ಯಕ್ಷ ಪ್ರಕಾಶ ಚವಾಣ್,ಮಹಾನಗರ ಪಾಲಿಕೆ ಸದಸ್ಯ ಎಂ.ಎಸ್. ಕರಡಿ, ಶಿವರುದ್ರ ಬಾಗಲಕೋಟ, ಪ್ರೇಮಾನಂದ ಬಿರಾದಾರ, ಮಳುಗೌಡ ಪಾಟೀಲ, ರಾಜಶೇಖರ ಕುರಿಯವರ, ಮಲ್ಲಿಕಾರ್ಜುನ ಗಡಗಿ, ಕಿರಣ ಪಾಟೀಲ, ವಿಠಲ ಹೊಸಪೇಟ, ಜವಾಹಾರ ಗೋಸಾವಿ, ಸ್ವಪ್ನಾ ಕಣಮುಚನಾಳ, ಪ್ರಮುಖರಾದ ರಾಜೇಶ ದೇವಗಿರಿ ಪಾಂಡುಸಾಹುಕಾರ ದೊಡಮನಿ, ವಿಕ್ರಮ ಗಾಯಕವಾಡ, ಮಡಿವಾಳ ಯಾಳವಾರ, ಅಶೋಕ ಬೆಲ್ಲದ, ರಾಜಶೇಖರ ಭಜಂತ್ರಿ, ಚಂದ್ರು ಚೌದರಿ, ಶರಣು ಕಾಖಂಡಕಿ, ದಾದಾಸಾಹೇಬ ಬಾಗಾಯತ, ರಾಜಶೇಖರ ಭಜಂತ್ರಿ, ದತ್ತಾ ಗುನ್ನಾಳಕರ, ವಿಜಯ ಜೋಶಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net