ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂದ ಪುತ್ರ ಡಾ. ಯತೀಂದ್ರ..!

yathindra siddaramaiah
Published on

ಮೈಸೂರು: ಸಿದ್ದರಾಮಯ್ಯ ಮತ್ತೊಂದು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಇದೆ ಎಂದು ವರುಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವರುಣ ಸಿದ್ದರಾಮಯ್ಯ ಅವರ ಪಾಲಿಗೆ ಅದೃಷ್ಟದ ಕ್ಷೇತ್ರ. ವರುಣದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದಾಗ ವಿಧಾನಸಭೆ ಪ್ರತಿಪಕ್ಷ ನಾಯಕರಾದರು, ನಂತರ ಮುಖ್ಯಮಂತ್ರಿಯಾದರು. ಈ ಬಾರಿಯೂ ಅವರಿಗೆ ಮುಖ್ಯಮತ್ರಿಯಾಗುವ ಅವಕಾಶವಿದೆ ಎಂದರು.

ಈ ಬಾರಿ ಸಿದ್ದರಾಮಯ್ಯ ವರುಣ ಕ್ಷೇತ್ರದಿಂದ ಸ್ಪರ್ಧಿಸಲಿ ಎಂಬುದು ನನ್ನ ಆಸೆ. ಈ ವಿಚಾರವನ್ನು ಅವರ ಗಮನಕ್ಕೆ ತಂದಿದ್ದೇನೆ. ಆದರೆ, ಅವರು ಇದುವರೆಗೆ ಯಾವುದೇ ತೀರ್ಮಾನ ಮಾಡಿಲ್ಲ. ಒಂದುವೇಳೆ ಸಿದ್ದರಾಮಯ್ಯ ವರುಣದಿಂದ ಸ್ಪರ್ಧಿಸಿದರೆ ನಾನು ಬೇರೆ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ನಾನು ಅಪ್ಪನ ಪರವಾಗಿ ನಿಂತು ಕೆಲಸ ಮಾಡುತ್ತೇನೆ. ಕೋಲಾರ ಸೇರಿದಂತೆ ಹಲವು ಕ್ಷೇತ್ರಗಳು ಸಿದ್ದರಾಮಯ್ಯಗೆ ಸೇಫ್ ಇದೆ. ಆದರೆ, ವರುಣ ಕ್ಷೇತ್ರಕ್ಕೆ ಬರಲಿ ಅನ್ನೋದು ನನ್ನ ಮತ್ತು ಪಕ್ಷದ ಕಾರ್ಯಕರ್ತರ ಬಯಕೆಯಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net