ಮೈಸೂರಿಗೆ ಜು.29 ರಂದು ಸಿದ್ದರಾಮಯ್ಯ ಭೇಟಿ

SIDDARAMAIAH
Published on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ನಗರಕ್ಕೆ ಭೇಟಿ ನೀಡಲಿದ್ದಾರೆ.

ಬೆಂಗಳೂರಿನಿಂದ ರಸ್ತೆ ಮೂಲಕ ಮಧ್ಯಾಹ್ನ 12ಕ್ಕೆ ನಗರಕ್ಕೆ ಆಗಮಿಸಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಗರಕ್ಕೆ ಆಗಮಿಸುವ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಮಣಿಪಾಲ ಆಸ್ಪತ್ರೆ ವೃತ್ತದ ಬಳಿ ಸ್ವಾಗತ ಕೋರಲಿದ್ದಾರೆ. ನಗರದಲ್ಲಿ ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಸಂಜೆ 4ಕ್ಕೆ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net