ಕೇಂದ್ರ ಅನುದಾನದ ಬಗ್ಗೆ ಚರ್ಚೆಗೆ ಸಿದ್ಧ

MT NEW
Published on

ಹುಬ್ಬಳ್ಳಿ : ಕೇಂದ್ರ ಸರ್ಕಾರ ಕಳೆದ 10 ವರ್ಷಗಳಲ್ಲಿ ರಾಜ್ಯಕ್ಕೆ ಎಷ್ಟು ಹಣ ನೀಡಿದೆ ಎಂಬುದರ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ರ್ಚಚಿಸಲು ಸಿದ್ಧ ಎಂದು ಶಾಸಕ ಮಹೇಶ ಟೆಂಗಿನಕಾಯಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.

ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಯುಪಿಎ ಸರ್ಕಾರ ಹಾಗೂ ಈಗಿನ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಎಷ್ಟು ಅನುದಾನ ನೀಡಿವೆ ಎಂಬುದರ ಬಗ್ಗೆ ಚರ್ಚೆ ಆಗಲಿ ಎಂದರು.

ಕೇಂದ್ರದ ಈಗಿನ ಸರ್ಕಾರದಿಂದ ರಾಜ್ಯಕ್ಕೆ ಸಾಕಷ್ಟು ಯೋಜನೆಗಳು ಹರಿದುಬಂದಿವೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ನೀಡಲು ಆಗದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರ ಇತಿ್ತೕಚೆಗೆ ಮಧ್ಯಂತರ ಬಜೆಟ್ ಮಂಡನೆ ಮಾಡಿ ಸಾಕಷ್ಟು ಯೋಜನೆ ನೀಡಿದರೂ ಜನರ ಮೇಲೆ ಯಾವುದೇ ತೆರಿಗೆ ಹೇರಿಲ್ಲ. ಕೇಂದ್ರ ಸರ್ಕಾರ ಜನಪರ ಬಜೆಟ್ ಮಂಡಿಸಿದೆ ಎಂದು ತಿಳಿಸಿದರು.

ರಾಜ್ಯದ ಆರ್ಥಿಕ ದುಸ್ಥಿತಿ ಮರೆಮಾಚುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ, ಕೇಂದ್ರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರದ ಸಚಿವರೊಂದಿಗೆ ಮಾತನಾಡಬೇಕು. ಚುನಾವಣೆ ಬಂದಾಗ ಅಷ್ಟೇ ಪಕ್ಷ ರಾಜಕೀಯ ಮಾಡಬೇಕು. ನಂತರ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಕ್ಷೇತ್ರಗಳನ್ನು ಬಿಜೆಪಿ ಗೆಲ್ಲಲಿದೆ. ಈ ಭಯ ಕಾಂಗ್ರೆಸ್​ನವರಿಗೆ ಆವರಿಸಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net