ಕಲಬುರಗಿಯಲ್ಲಿ ಸಿದ್ಧರಾಮೇಶ್ವರ ಜಯಂತಿಗೆ ಕಡೆಗಣನೆ, ಬಹಿಷ್ಕಾರ, ಸ್ಟ್ರೈಕ್

IMG-20240115-WA0044
Published on

ಕಲಬುರಗಿ: ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲೆ ಯಾವುದೇ ಜನಪ್ರತಿನಿಧಿಗಳು ಭಾಗವಹಿಸಿಲ್ಲ ಎಂದು ಖಂಡಿಸಿ, ಜಯಂತ್ಯುತ್ಸವ ಸಮಿತಿ ಪದಾಧಿಕಾರಿಗಳು ಸೇರಿದಂತೆ ಸಿದ್ಧರಾಮೇಶ್ವರರ ಭಕ್ತರು, ಅಭಿಮಾನಿಗಳು ಜಿಲ್ಲಾಡಳಿತದ ಆಚರಣೆ ಬಹಿಷ್ಕರಿಸಿ, ಪ್ರತಿಭಟಿಸಿದರು.

ನಗರದ ಡಾ.ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತದಿಂದ ಸೋಮವಾರ ಏರ್ಪಡಿಸಿದ ಕಾರ್ಯಕ್ರಮವನ್ನು ಬಹಿಷ್ಕರಿಸಿ ಪ್ರತಿಭಟನಾತ್ಮಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೂಜ್ಯರೊಂದಿಗೆ ಡಾ.ಎಸ್.ಎಂ.ಪಂಡಿತ್ ರಂಗ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸಮಾಜ ಸಣ್ಣದಾಗಿದ್ದು, ನಿರ್ಲಕ್ಷ್ಯ ಮಾಡಲಾಗಿದೆ. ಸಮಾಜದವರನ್ನು ಏಕೆ ಕರೆಯುತ್ತೀರಿ. ನೀವೇ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳೊಂದಿಗೆ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳು ನೌಕರಿ ಮಾಡುವುದಷ್ಟೇ ಅಲ್ಲ, ಅದನ್ನು ಸಮರ್ಪಕವಾಗಿ ಜಾರಿಗೆ ತರಬೇಕು ಎಂದು ಕಿಡಿ ಕಾರಿದರು.

ಬರಲಾರದವರ ಹೆಸರುಗಳನ್ನು ಏಕೆ ಹಾಕುತ್ತೀರಿ. ಶರಣರಿಗೆ ಅಪಮಾನ ಮಾಡುತ್ತಿದ್ದಾರೆ. ಬರುವ ಅವಶ್ಯ ಇಲ್ಲ ಎಂದು ಕಿಡಿಕಾರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net