ಕಡಣಿ ಗ್ರಾಮದಲ್ಲಿ ಅಡ್ಡಪಲ್ಲಕ್ಕಿ ಉತ್ಸವ

almel 5-1
ಆಲಮೇಲ ತಾಲೂಕಿನ ಕಡಣಿ ಗ್ರಾಮದಲ್ಲಿ ಭೋಗಲಿಂಗೇಶ್ವರ ಜಾತ್ರೆ ನಿಮಿತ್ತ ಕಾಶಿ ಮಹಾಪೀಠದ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರ ಅಡ್ಡ ಪಲ್ಲಕ್ಕಿ ಮಹೋತ್ಸವ ನಡೆಯಿತು.
Published on

ಆಲಮೇಲ: ತಾಲೂಕಿನ ಕಡಣಿ ಗ್ರಾಮದಲ್ಲಿ ಶನಿವಾರ ಸಂಜೆ ಭೋಗಲಿಂಗೇಶ್ವರ ಜಾತ್ರಾ ನಿಮಿತ್ತ ಕಾಶಿ ಮಹಾಪೀಠದ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಮಹೋತ್ಸವ ನಡೆಯಿತು.

ಗ್ರಾಮದ ಹನುಮಾನ ದೇವಸ್ಥಾನದಿಂದ ಪ್ರಾರಂಭವಾದ ಕಾರ್ಯಕ್ರಮದಲ್ಲಿ ನೂರಾರು ಕುಂಭ ಹೊತ್ತ ಮಹಿಳೆಯರೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶಂಕರಲಿಂಗ ದೇವಸ್ಥಾನದಲ್ಲಿ ಮುಕ್ತಾಯಗೊಂಡಿತು. ಬಳಿಕ ಪುರಾಣ ಮಹಾಮಂಗಲ ಕಾರ್ಯಕ್ರಮ ನಡೆಯಿತು.

ಅಜಲಪೂರದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು, ಶಿರಶ್ಯಾಡದ ಅಭಿನವ ಮುರುಘೇಂದ್ರ ಶಿವಾಚಾರ್ಯರು, ಆಲಮೇಲದ ಚಂದ್ರಶೇಖರ ಶಿವಾಚಾರ್ಯರು, ಯಂಕಂಚಿಯ ರುದ್ರಮುನಿ ಶಿವಾಚಾರ್ಯರು, ಆಲಮೇಲ ಅರ್ಜುಣಗಿ ಮಠದ ಸಂಗನಬಸವ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದರು.

ಆಲಮೇಲ ಅಳ್ಳೋಳ್ಳಿಮಠದ ಬಸವರಾಜ ತಾವರಗೇರಿ, ವೀರಭದ್ರ ಕತ್ತಿ, ಭೋಗಪ್ಪ ಲಾಳಸಂಗಿ, ಕೇದಾರನಾಥ ಕತ್ತಿ, ಬಸಲಿಂಗಪ್ಪ ಕತ್ತಿ, ಶರಣು ಕತ್ತಿ, ಹಣಮಂತರಾಯ ಕಳಸಗೊಂಡ, ಗಂಗಾಧರ ಶ್ರೀಗಿರಿ, ಕಮಲಾಕರ ಕತ್ತಿ, ಸಂತೋಷ ಕ್ಷತ್ರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net