ಸಹಿ ಸಂಗ್ರಹ ಅಭಿಯಾನ ಆರಂಭ

Published on

ಬಳ್ಳಾರಿ : ನಗರದ ಪ್ರಮುಖ ವೃತ್ತಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ವಿಳಂಬ ಹಾಗೂ ಮೂಲಸೌಕರ್ಯ ಒದಗಿಸುವಂತೆ ಆಗ್ರಹಿಸಿ ಇಲ್ಲಿನ ಗಡಗಿ ಚೆನ್ನಪ್ಪ ವೃತ್ತದಲ್ಲಿ ಬಳ್ಳಾರಿ ನಾಗರಿಕ ಹೋರಾಟ ಸಮಿತಿಯಿಂದ (ಬಿಎನ್‌ಎಚ್‌ಎಸ್) ವತಿಯಿಂದ ಸೋಮವಾರ ಸಹಿ ಸಂಗ್ರಹಣಾ ಅಭಿಯಾನ ನಡೆಯಿತು.

ನಗರದಲ್ಲಿ ಕುಡಿವ ನೀರು ಕಲುಷಿತಗೊಳ್ಳದಂತೆ ಕ್ರಮವಹಿಸಬೇಕು. ಮಹಾನಗರ ಪಾಲಿಕೆಯಲ್ಲಿ ಖಾಲಿಯಿರುವ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು. ಇಲ್ಲಿನ ಮೋತಿ ಹಾಗೂ ಸುಧಾ ಕ್ರಾಸ್ ವೃತ್ತದ ಬಳಿಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಒಳಚರಂಡಿ ಹೂಳು ತೆಗೆದು ಹಾಗೂ ರಸ್ತೆಯಲ್ಲಿನ ಗುಂಡಿಗಳು ಮುಚ್ಚಬೇಕು. ನಗರದಲ್ಲಿನ ಬೀದಿ ನಾಯಿ ಹಾಗೂ ಬಿಡಾಡಿದನಗಳ ನಿಯಂತ್ರಣ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಸಮಿತಿಯ ಸದಸ್ಯರು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net