ಮತದಾನ ಜಾಗೃತಿಗಾಗಿ ಹಸ್ತಾಕ್ಷರ ಸಂಗ್ರಹಣಾ ಅಭಿಯಾನ

16
Published on

ಮೈಸೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಗಾಗಿ ಶುಕ್ರವಾರ ಹಸ್ತಾಕ್ಷರ ಸಂಗ್ರಹಣಾ ಅಭಿಯಾನ ಆಯೋಜಿಸಲಾಗಿತ್ತು.
ನಗರಪಾಲಿಕೆಯ ವಲಯ ಕಚೇರಿ 6ರಲ್ಲಿ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೇಪಿಸಲು ಸ್ವಾಗತ ಕಮಾನು, ವಲಯ ಮತದಾನ ಕುರಿತು ಗೋಡೆಬರಹ, ಮತದಾನದ ಸೆಲ್ಫಿ ಕೌಂಟರ್ ಹಾಗೂ ‘ನಾನು ಮತದಾನ ಮಾಡುತ್ತೇನೆ’ ಎಂಬ ಕುರಿತು ಹಸ್ತಾಕ್ಷರ ಸಂಗ್ರಹಣಾ ಅಭಿಯಾನ ನಡೆಯಿತು.
ಚಾಮರಾಜ ವಿಧಾನ ಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ವೆಂಕಟರಾಜ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಾರ್ವಜನಿಕರಿಗೆ ಏಪ್ರಿಲ್ 26 ರಂದು ತಪ್ಪದೆ ಮತದಾನ ಮಾಡಲು ಮನವಿ ಮಾಡಿದರು.
ವಲಯ ಆಯುಕ್ತರಾದ ವಾಣಿ ವಿ ಆಳ್ವ, ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ಪರಿಸರ ಇಂಜಿನಿಯರ್ ಮೈತ್ರಿ, ಸಹಾಯಕ ಕಂದಾಯಾಧಿಕಾರಿಗಳಾದ ಸಿದ್ದರಾಜು, ಅಶೋಕ್, ಕಿರಿಯ ಇಂಜಿನಿಯರ್ ಕೃಷ್ಣಮೂರ್ತಿ, ಹಿರಿಯ ಆರೋಗ್ಯ ನಿರೀಕ್ಷಕರು, ಕಂದಾಯ ಅಧಿಕಾರಿಗಳು, ಕಚೇರಿ ಸಿಬ್ಬಂದಿ, ಸಾರ್ವಜನಿಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net