

ಭದ್ರಾವತಿ: ನಗರದ ಕೆಎಸ್ಆರ್ಟಿಸಿ ಮುಖ್ಯ ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ದಿ. ಎಂ.ಜೆ.ಅಪ್ಪಾಜಿ ಹೆಸರು ನಾಮಕರಣಗೊಳಿಸುವ ನಿಟ್ಟಿನಲ್ಲಿ ನಡೆಸುತ್ತಿರುವ ಹೋರಾಟ ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ತಿಳಿಸಿದರು.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಈ ಹಿಂದೆ ನಿಲ್ದಾಣಕ್ಕೆ ಅಪ್ಪಾಜಿ ಹೆಸರು ನಾಮಕರಣಗೊಳಿಸಲು ಮಾಜಿ ಶಾಸಕ ವೈಎಸ್ವಿ ದತ್ತ ನೇತೃತ್ವದಲ್ಲಿ ಹೋರಾಟ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಇಲ್ಲಿವರೆಗೂ ಸ್ಪಂದನೆ ಸಿಕ್ಕಿಲ್ಲ, ಮುಂದಿನ ಹಂತದಲ್ಲಿ ಹೋರಾಟ ಅನಿವಾರ್ಯ ಎಂದರು.
ಅಪ್ಪಾಜಿ ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕಾದರೆ ಅವರ ಹೆಸರನ್ನು ಬಸ್ ನಿಲ್ದಾಣಕ್ಕೆ ನಾಮಕರಣಗೊಳಿಸುವುದು ಸೂಕ್ತ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸಹಿ ಸಂಗ್ರಹ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯೋಣ. ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿ ಒತ್ತಡ ಹಾಕೋಣ ಎಂದು ವಿವಿಧ ಮುಖಂಡರಾದ ಕರಿಯಪ್ಪ, ಮಣಿಶೇಖರ್, ಜೆ.ಪಿ.ಯೋಗೇಶ್, ಕರುಣಾಮೂರ್ತಿ ತಿಳಿಸಿದರು.
ಶಿಮುಲ್ ಅಧ್ಯಕ್ಷ ಆನಂದ್, ತಾಪಂ ಸದಸ್ಯರಾದ ಧಮೇಗೌಡ, ಯಶೋದಮ್ಮ, ನಗರಸಭೆ ಮಾಜಿ ಸದಸ್ಯರಾದ ಎಂ.ಎಸ್.ಸುಧಾಮಣಿ, ವಿಶಾಲಾಕ್ಷಿ, ಮುಖಂಡರಾದ ಗುಣಶೇಖರ್, ಬದರಿನಾರಾಯಣ, ಕರವೇ ತಾಲೂಕು ಅಧ್ಯಕ್ಷ ಬಿ.ವಿ.ಗಿರೀಶ್, ಜೆಡಿಯು ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್.ಗೌಡ, ಆಮ್ ಆದ್ಮಿ ರವಿಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಶಿವಾಜಿರಾವ್ ಗಾಯಕ್ವಾಡ್ ಇದ್ದರು.