ವಕ್ಫ್ ಮಸೂದೆ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಮೌನ ಮೆರವಣಿಗೆ

11 Dwd 10
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಕೇಂದ್ರ ಸರ್ಕಾರದ ವಕ್ಫ್ ಮಸೂದೆ ವಿರೋಧಿಸಿ ನಗರದಲ್ಲಿ ಶುಕ್ರವಾರ ಅಂಜುಮನ್ ಸಂಸ್ಥೆ ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಮೌನ ಮೆರವಣಿಗೆ ನಡೆಸಲಾಯಿತು.

ಅಂಜುಮನ್ ಸಂಸ್ಥೆಯಿ0ದ ಆರಂಭವಾದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಂಚರಿಸಿತು. ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನ ಕಪ್ಪು ಪಟ್ಟಿ ಧರಿಸಿ ಭಾಗವಹಿಸಿದ್ದರು.

ಕೇಂದ್ರ ಸರ್ಕಾರ ಒಂದು ಸಮುದಾಯವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಅದಕ್ಕಾಗಿ ಅಲ್ಲಾಹನ ಹೆಸರಲ್ಲಿನ ಆಸ್ತಿ ಕಬಳಿಸಲು ಮುಂದಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ತಿದ್ದುಪಡಿ ವಿಧೇಯಕವನ್ನು ಹಿಂಪಡೆಯುವ0ತೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ರವಾನಿಸಿದರು.

ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ, ಉಪಾಧ್ಯಕ್ಷ ಬಶೀರಅಹ್ಮದ್ ಜಹಗೀರದಾರ, ಕಾರ್ಯದರ್ಶಿ ಎಸ್.ಎಸ್. ಸರಗಿರೋ, ಜಂಟಿ ಕಾರ್ಯದರ್ಶಿ ಮಹಮ್ಮದಶಫಿ ಕಳ್ಳಿಮನಿ, ಖಜಾಂಚಿ ಮಹಮ್ಮದರಫೀಕ ಶಿರಹಟ್ಟಿ ಹಾಗೂ ಸಂಸ್ಥೆಯ ಪದಾಽಕಾರಿಗಳು, ಮುಸ್ಲಿಂ ಸಮಾಜದವರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net