ಕುವೆಂಪು ವಿಶ್ವ ವಿದ್ಯಾಲಯಕ್ಕೆ ಬಸ್‌ಸೌಲಭ್ಯ ಕಲ್ಪಿಸಿ

kpp1
Published on

ಕೊಪ್ಪ : ವಿದ್ಯಾರ್ಥಿಗಳಿಗೆ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾಲಯಕ್ಕೆ ಹೋಗಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಬಸ್ ಬಿಡಲು ಇಲಾಖೆ ಅಧಿಕಾರಿಗೆ ಮನವಿ ಮಾಡಲಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಶಶಿಕುಮಾರ್ ಹೇಳಿದರು.

ತಾಲೂಕು ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ಹರಿಹರಪುರ ಸಮೀಪದ ದೇವರಮನೆ ಎಂಬಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ಲಿಸುತ್ತಿಲ್ಲ ಎಂಬ ದೂರು ಕೇಳಿಬಂದಿದೆ. ಈ ಸಮಸ್ಯೆ ನಿವಾರಿಸುವಂತೆ ಇಲಾಖೆ ಅಧಿಕಾರಿಗೆ ತಿಳಿಸಲಾಗಿದೆ ಎಂದರು.

ಅನ್ನಭಾಗ್ಯ ಯೋಜನೆ ಬಗ್ಗೆ ತಾಲೂಕಿನ ಎಲ್ಲ ಪಡಿತರ ವಿತರಣೆ ಕೇಂದ್ರದಲ್ಲಿ ಕಡ್ಡಾಯವಾಗಿ ಲಕ ಅಳವಡಿಸಬೇಕು ಎಂದು ಸೂಚಿಸಲಾಗಿದೆ. ಜನವರಿವರೆಗೆ ಗೃಹಲಕ್ಷ್ಮಿ ಯೋಜನೆ ಹಣ ಸಂದಾಯವಾಗಿದೆ. ಕುವೆಂಪು ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳಿಗೆ ಮಾರ್ಕ್ಸ್ ಕಾರ್ಡ್ ತಡವಾಗಿ ಯುವ ನಿಧಿಗೆ ನೋಂದಣಿಗೆ ಅಡ್ಡಿಯಾಗಿದ್ದ ಸಮಸ್ಯೆ ನಿವಾರಣೆಯಾಗಿದೆ.

ಗ್ಯಾರಂಟಿ ಯೋಜನೆಯಿಂದ ಅರ್ಹ ಲಾನುಭವಿಗಳು ಯಾರೂ ಹೊರಗುಳಿಯಬಾರದು ಎಂಬ ಉದ್ದೇಶದಿಂದ ತಾಲೂಕಿನ ಗುಡ್ಡಗಾಡು ಪ್ರದೇಶವಾದ ಮೆಣಸಿನಹಾಡ್ಯ ಭಾಗದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ ನಡೆಸಿ ಅಲ್ಲಿನ ಜನರಿಗೆ ಯೋಜನೆ ಸಮರ್ಪಕವಾಗಿ ತಲುಪುವಂತೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ ಜಿಲ್ಲೆಗಳನ್ನು ಒಳಗೊಂಡು ಗ್ಯಾರಂಟಿ ಸಮಿತಿಯ ಸಮನ್ವಯ ಹಾಗೂ ವಿಚಾರ ವಿನಿಮಯ ಸಭೆ ನಡೆಸಲು ಜಿಲ್ಲಾ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದರು. ತಾಲೂಕು ಪಂಚಾಯಿತಿ ಇಒ ಎಚ್.ಡಿ.ನವೀನ್ ಕುಮಾರ್, ಸಹಾಯಕ ನಿರ್ದೇಶಕ(ಗ್ರಾಮೀಣ ಉದ್ಯೋಗ) ಚೇತನ್, ಸಮಿತಿ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net