ಕುಂದಗೋಳದಲ್ಲಿ ಕಾಂಗ್ರೆಸ್‌ನಿಂದ ಮೌನ ಪ್ರತಿಭಟನೆ

KDL PROTEST
Published on

ಕುಂದಗೋಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ತಾಲೂಕು ಕಾಂಗ್ರೆಸ್ ಘಟಕದ ವತಿಯಿಂದ ಕಪ್ಪುಬಟ್ಟೆ ಧರಿಸಿ ಪಟ್ಟಣದ ಗಾಂಧಿ ಸರ್ಕಲ್ ಬಳಿ ಬುಧವಾರ ಮೌನ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಮುಖಂಡ ಮುತ್ತಣ್ಣ ಶಿವಳ್ಳಿ ಮಾತನಾಡಿ, ದೇಶದ ಇತಿಹಾಸದಲ್ಲಿಯೇ ಸಂಸತ್ ಭವನದಲ್ಲಿ ಇಂಥ ಘಟನೆ ಜರುಗಿದೆ. ಇದೊಂದು ದ್ವೇಷ ರಾಜಕಾರಣವಾಗಿದ್ದು, ಒಂದು ರೀತಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡಲು ಬಿಜೆಪಿ ಹೊರಟಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮಾಜಿ ಶಾಸಕ ಎಂ.ಎಸ್. ಅಕ್ಕಿ ಹಾಗೂ ಕಾಂಗ್ರೆಸ್ ಮುಖಂಡ ಗೌಡಪ್ಪಗೌಡ ಪಾಟೀಲ ಮಾತನಾಡಿ, ದೇಶದಲ್ಲಿ ಬಿಜೆಪಿಯ ದುರಾಡಳಿತದ ವಿರುದ್ಧ ಜನರು ಬೇಸತ್ತು ದೇಶದ ಅನೇಕ ರಾಜ್ಯಗಳಲ್ಲಿ ಬಿಜೆಪಿಯನ್ನು ಜನರು ತಿರಸ್ಕರಿಸಿ ಕಾಂಗ್ರೆಸ್ ಅನ್ನು ಬೆಂಬಲಿಸುತ್ತಿರುವುದರಿಂದ ಬಿಜೆಪಿಯವರಿಗೆ ನಡುಕ ಶುರುವಾಗಿದೆ. ಹೀಗಾಗಿ ಈ ರೀತಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಡಿವೆಪ್ಪ ಶಿವಳ್ಳಿ, ಶಾಕೀರ್ ಸನದಿ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಉಪ್ಪಿನ, ವಸಂತ ಲದ್ವಾ, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ ಪಾಣಿಗಟ್ಟಿ, ಜಿ.ಡಿ. ಘೋರ್ಪಡೆ, ಬಸವರಾಜ ಶಿರಸಂಗಿ, ಆಸಿಫ್ ಹರಪನಹಳ್ಳಿ, ತಯ್ಯಬ ಮಕಾನದಾರ, ಅಪ್ಪಣ್ಣ ಹಿರೇಗೌಡ್ರ, ದೃತಿ ಸಾಲಮನಿ, ನಂಜಪ್ಪ ನೆಲವಡಿ, ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net