ವಸತಿ ಶಾಲಾ ನೌಕರರಿಂದ ಮೌನ ಪ್ರತಿಭಟನೆ

raichur
raichur
Published on

ರಾಯಚೂರು ವಸತಿ ಶಿಕ್ಷಣ ನಿರ್ದೇಶನಾಲಯ ಸ್ಥಾಪನೆ, ಜ್ಯೋತಿ ಸಂಜೀವಿನಿ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ವಸತಿ ಶಾಲೆಗಳ ನೌಕರರ ಸಂಘದ ಪದಾಧಿಕಾರಿಗಳು ಮೌನ ಪ್ರತಿಭಟನಾ ಮೆರವಣಿಗೆ ಮಾಡಿದರು.

ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾದಿಕಾರಿಗಳ ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ಕಚೇರಿಯ ಗ್ರೇಡ್-2 ತಹಸೀಲ್ದಾರ್ ಪರಶುರಾಮ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು. ವಸತಿ ಶಾಲೆಗಳಲ್ಲಿ ಕೆಲಸ ಮಾಡತ್ತಿರುವ ನೌಕರರಿಗೆ ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯಗಳನ್ನು ಒದಗಿಸಿಕೊಡಬೇಕು, ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡಬೇಕು, ಶೇ 10 ರಷ್ಟು ವಿಶೇಷ ಭತ್ಯೆ ಮಂಜೂರಾತಿ ನೀಡಬೇಕು. ಈ ಬೇಡಿಕೆಗಳು ಈಡೇರಿಸಲು ಒತ್ತಾಯಿಸಿ ಮೇ.26 ರಿಂದ 28ರವರೆಗೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗಿದೆ.

29 ರಂದು ಎಲ್ಲಾ ವಸತಿ ಶಾಲೆಗಳಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಲಾಗಿದೆ, ನಿನ್ನೆ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಯಿತು. ಈ ಬೇಡಿಕೆ ಈಡೇರಿಕೆಗೆ ಸ್ಪಂದಿಸದಿದ್ದರೆ ಜೂ.2 ರಿಂದ ಜಿಲ್ಲಾಧಿಕಾರಿ ಕಚೇರಿ ಹಾಗೂ ವಸತಿ ಶಾಲೆಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುತ್ತದೆಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಶೈಲ ನಾಯಕ, ಉಪಾಧ್ಯಕ್ಷ ರುದ್ರೇಶ, ಪ್ರಧಾನ ಕಾರ್ಯದರ್ಶಿ ಸಾಬುಗೌಡ, ಸಹ ಕಾರ್ಯದರ್ಶಿ ಪ್ರಕಾಶ ರಾಂಪೂರ, ಸಂಘಟನಾ ಕಾರ್ಯದರ್ಶಿ ಶಶಿಧರ, ಖಜಾಂಚಿ ಲಾಲ್ ಅಹ್ಮದ್ ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net