

ಹಂಪಾಪುರ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಎಚ್.ಡಿ.ಕೋಟೆ ತಾಲೂಕಿನ ಹಂಪಾಪುರ ಮತ್ತು ಹೊಮ್ಮರಗಳ್ಳಿ ಗ್ರಾಮಗಳಲ್ಲಿ ಹಿಂದು ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಬಿತ್ತಿ ಪತ್ರಗಳನ್ನು ಹಿಡಿದು ಮೌನ ಪ್ರತಿಭಟನೆ ನಡೆಸಿದರು.
ಕೆಜಿ ಹಳ್ಳಿ, ಡಿಜೆ ಹಳ್ಳಿ, ದೆಹಲಿ ದಂಗೆ ಬರಿ ಟ್ರೈಲರ್, ಈಗ ಬಾಂಗ್ಲಾದೇಶದಲ್ಲಿ ನಡೆದಿದೆ ಫುಲ್ ಫಿಕ್ಚರ್ ಎಂದು ಬಿತ್ತಿ ಪತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಲ್ಲಿನ ಅಲ್ಪಸಂಖ್ಯಾತರಾದ ಹಿಂದು, ಬೌದ್ಧ ಸಮುದಾಯಗಳ ಮೇಲಿನ ದೌರ್ಜನ್ಯ ಖಂಡಿಸಿ, ಇಲ್ಲಿನ ಹಿಂದುಗಳು ನಮ್ಮ ಸಹೋದರರು. ಅವರೆಲ್ಲರ ರಕ್ಷಣೆಗೆ ನಾವೆಲ್ಲರೂ ನಿಲ್ಲಬೇಕು. ಸರ್ಕಾರದ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.