ಮೈಸೂರಿನಲ್ಲಿ ‘ಸಿಲ್ಕ್ ಇಂಡಿಯ’ ಮೇಳಕ್ಕೆ ಚಾಲನೆ

‘Silk India’ fair in Mysore
Published on

ಮೈಸೂರು: ಮದುವೆ ಸಮಾರಂಭವನ್ನು ಗಮನದಲ್ಲಿಟ್ಟುಕೊಂಡು ನಗರದ ಸರ್ದನ್ ಸ್ಟಾರ್ ಹೋಟೆಲ್‌ನಲ್ಲಿ ‘ಸಿಲ್ಕ್ ಇಂಡಿಯ’ ಆಯೋಜಿಸಿರುವ ದೇಶದ ಎಲ್ಲ ರಾಜ್ಯಗಳ ಪರಿಶುದ್ಧ ರೇಷ್ಮೆ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಗುರುವಾರ ಚಾಲನೆ ದೊರೆಯಿತು. ಈ ಮೇಳವು ಫೆ.25 ನಡೆಯಲಿದೆ.

ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 60ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳನ್ನು ಮೈಸೂರು ಜನತೆಯ ಮುಂದೆ ಪ್ರತಿದಿನ ಬೆಳಗ್ಗೆ 10.30 ರಿಂದ ರಾತ್ರಿ 8.30 ರವರೆಗೆ ಪ್ರದರ್ಶಿಸಿ ಮಾರಾಟ ಮಾಡುವರು. ಮೇಳಕ್ಕೆ ನಟಿ ರಜನಿ ಭಾರದ್ವಾಜ್ ಚಾಲನೆ ನೀಡಿದರು.

ಮೇಳದಲ್ಲಿ ತಸ್ಸರ್ ರೇಷ್ಮೆ ಸೀರೆಗಳು, ಕ್ರೇಪ್ ಮತ್ತು ಜಾರ್ಜೆಟ್ ಸಿಲ್ಕ್ ಸೀರೆಗಳು, ಅರಿಣಿ ರೇಷ್ಮೆ ಸೀರೆಗಳು, ಧರ್ಮಾವರಂ ಸೀರೆಗಳು, ಕಾಂಚಿಪುರಂ ಸಿಲ್ಕ್ ಮತ್ತು ಮದುವೆ ಸೀರೆಗಳು, ರಾ ಸಿಲ್ಕ್ ಮತ್ತು ಕೋಸಾ ಸೀರೆಗಳು, ಕಲ್ಕೊತ್ತಾ ಗಣಪತಿ ಸೀರೆಗಳು, ಢಾಕ ಸೀರೆಗಳು, ಡಿಸೈನರ್ ಎಂಬ್ರಾಯಿಡರಿ ಸೀರೆ ಮತ್ತು ಡ್ರೆಸ್, ಬಲ್‌ಚೂರಿ ರೇಷ್ಮೆ, ಮಟ್ಕಾ ಸೀರೆಗಳು, ಪ್ರೀಂಟೆಡ್ ಸೀರೆಗಳು, ಪಶ್ಮೀನಾ ಸೀರೆಗಳು, ಡಿಸೈನರ್ ಡ್ರೆಸ್ ಮೇಟಿರಿಯಲ್‌ಗಳು ಮತ್ತು ಸೀರೆಗಳು, ಬಾಗಲ್‌ಪುರ್ ರೇಷ್ಮೆ ಸೀರೆ ಮತ್ತು ಡ್ರೆಸ್, ಉಪ್ಪಡಾ ಮತ್ತು ಗೊಡ್ವಾಲ್ ಸೀರೆಗಳು, ಮಹೇಶ್ವರಿ ಮತ್ತು ಕೋಟಾ ಸಿಲ್ಕ್, ಟೆಂಪಲ್ ಬಾರ್ಡಾರ್‌ಉಳ್ಳ ಮುಲ್‌ಬಾರಿ ಸಿಲ್ಕ್, ಕಲ್ಕೋತ್ತಾ ರೇಷ್ಮೆ ಸೀರೆಗಳು, ಬನಾರಸ್‌ ಮತ್ತು ಜಮ್‌ದಾನಿ ರೇಷ್ಮೆ, ಶಿಫಾನ್ ಸೀರೆಗಳು, ಬುಟ್ಟಿ ಸೀರೆಗಳು, ಚಂದೇರಿ ಸಿಲ್ಕ್ ಮತ್ತು ಕೈ ಅಚ್ಚಿನ ಸೀರೆಗಳು ಮಾರಾಟಕ್ಕೆ ಲಭ್ಯವಿದೆ.

ಇದಲ್ಲದೆ ಕುರ್ತಾ, ಸ್ಟೋಲ್ಸ್, ಶಾಲುಗಳು, ಸಲ್‌ವಾರ್ ಕಮೀಜ್ ಮತ್ತು ಉಡುಪಿನ ಬಟ್ಟೆಗಳು, ಕುಶನ್ ಕವರ್‌ಗಳು ಮತ್ತು ಬೆಡ್‌ಶೀಟ್‌ಗಳನ್ನು ಈ ವಸ್ತುಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡಲಾಗುತ್ತಿದೆ. ಈ ವಸ್ತುಗಳನ್ನು ಉತ್ವಾದಕರೆ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತಿರುವುದರಿಂದ ವಸ್ತುಗಳು ನ್ಯಾಯಯುತ ಬೆಲೆಯಲ್ಲಿ ದೊರೆಯಲಿದೆ. ಮಾಹಿತಿಗೆ ಮೊ: 8660714252 ಸಂಪರ್ಕಿಸಬಹುದು.

ದೇಶದ ಅತ್ಯುತ್ತಮ ಸಿಲ್ಕ್ ಸೀರೆಗಳು ನಗರದ ಸರ್ದನ್ ಸ್ಟಾರ್ ಹೋಟೆಲ್‌ನಲ್ಲಿ ಆಯೋಜಿಸಿರುವ ಸಿಲ್ಕ್ ಇಂಡಿಯಾ ಮೇಳದಲ್ಲಿ ದೊರೆಯುತ್ತಿದೆ. ಸಾಕಷ್ಟು ಅತ್ಯುತ್ತಮ ಕಲೆಕ್ಷನ್‌ಗಳು ಇಲ್ಲಿವೆ. ದೇಶದ ವಿವಿಧೆಡೆ ತಯಾರಾಗುವ ಸೀರೆಗಳನ್ನು ಸಂಗ್ರಹಿಸುವುದು ನನಗೆ ಇಷ್ಟ. ಹಾಗಾಗಿ ಇಲ್ಲಿ ದೇಶದ ವಿವಿಧ ಸೀರೆಗಳನ್ನು ಒಂದೇ ಸೂರಿನಡಿ ನೋಡಿ ಖುಷಿಯಾಗಿದ್ದೇನೆ.

ರಜನಿ ಭಾರದ್ವಾಜ್, ನಟಿ

ಕಳೆದ 12 ವರ್ಷಗಳಿಂದ ಸಿಲ್ಕ್ ಇಂಡಿಯಾ ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸುತ್ತಿದ್ದೇವೆ. ಈ ಬಾರಿ ಸರ್ದನ್ ಸ್ಟಾರ್ ಹೋಟೆಲ್‌ನಲ್ಲಿ ದೇಶದ 17 ರಾಜ್ಯಗಳ ಸೀರೆಗಳ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ. ಸಿಲ್ಕ್ ಇಂಡಿಯಾ ಮೈಸೂರು ಭಾಗದಲ್ಲಿ ಮನೆ ಮಾತಾಗಿದ್ದು, ಈ ಬಾರಿ ಮದುವೆ ಸಮಾರಂಭವನ್ನು ಗಮನದಲ್ಲಿಟ್ಟುಕೊಂಡು ಮೇಳ ಆಯೋಜಿಸಲಾಗಿದೆ. ಕಡಿಮೆ ಬೆಲೆಗೆ 140 ವಿವಿಧ ರೀತಿಯ ಅತ್ಯುತ್ತಮ ಗುಣಮಟ್ಟದ ಸೀರೆಯನ್ನು ಇಲ್ಲಿ ಖರೀದಿಸಬಹುದು.

ಅಭಿನಂದನ್, ವ್ಯವಸ್ಥಾಪಕ ನಿರ್ದೇಶಕ, ಸಿಲ್ಕ್ ಇಂಡಿಯಾ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net