ರೇಷ್ಮೆ ಹುಳುಗಳಿಗೆ ದುಷ್ಕರ್ಮಿಗಳಿಂದ ವಿಷ

Published on

ಶಿಡ್ಲಘಟ್ಟ: ತಾಲೂಕಿನ ಲಕ್ಕಹಳ್ಳಿಯ ನಿವೃತ್ತ ಉಪನ್ಯಾಸಕ ಆರ್.ಆಂಜನೇಯ ಎಂಬುವವರ ಹಿಪ್ಪುನೇರಳೆ ಸೊಪ್ಪಿಗೆ ದುಷ್ಕರ್ಮಿಗಳು ವಿಷ ಸಿಂಪಡಿಸಿದ್ದು, ರೇಷ್ಮೆ ಹುಳುಗಳು ಸಾವಿಗೀಡಾಗಿವೆ.

ಆಂಜನೇಯ ಅವರು ಒಟ್ಟು ನಾಲ್ಕು ಎಕರೆ ತೋಟದಲ್ಲಿ ಹಿಪ್ಪುನೇರಳೆ ಬೆಳೆದಿದ್ದು, ಈ ಪೈಕಿ ಒಂದು ಎಕರೆ ಸೊಪ್ಪಿಗೆ ದುಷ್ಕರ್ಮಿಗಳು ಶನಿವಾರ ವಿಷ ಸಿಂಪಡಿಸಿದ್ದಾರೆ. ಪರಿಣಾಮ ಹಣ್ಣಾದ ಮತ್ತು ಮೂರನೇ ಹಂತದಲ್ಲಿದ್ದ ಒಟ್ಟು 300 ಮೊಟ್ಟೆಗಳ ಹುಳುಗಳು ಸತ್ತಿವೆ.

ಇನ್ನು ಘಟನೆ ಮಾಹಿತಿ ತಿಳಿದು, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಅಕ್ಮಲ್ ಪಾಷ ಮತ್ತು ವಿಸ್ತರಣಾಧಿಕಾರಿ ಎಂ.ಸಿ.ಭಾರತಿ ಭಾನುವಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದು, ಸೊಪ್ಪಿಗೆ ವಿಷ ಸಿಂಪಡನೆಯನ್ನು ದೃಢೀಕರಿಸಿದ್ದಾರೆ. ಶಿಡ್ಲಘಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net