ಸೆ.25ಕ್ಕೆ ಕುಶಾಲನಗರ ಹೋಬಳಿ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ

Silver Festival of Kushalanagar Hobli Journalists Association on September 25
Published on

ಮಡಿಕೇರಿ:

ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕುಶಾಲನಗರ ಹೋಬಳಿ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸೆ. 25ರಂದು ಕುಶಾಲನಗರದಲ್ಲಿ ನಡೆಯಲಿದೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ. ಎನ್. ಚಂದ್ರಮೋಹನ್ ತಿಳಿಸಿದ್ದಾರೆ. 1999ರಲ್ಲಿ ಆರಂಭಗೊAಡ ಸಂಘ ಇದೀಗ 25 ವರ್ಷ ಪೂರೈಸಿದೆ. ಈ ಸಂಬAಧ ಈಗಾಗಲೇ ಬೆಳ್ಳಿಹಬ್ಬದ ಅಂಗವಾಗಿ 25 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರುಗಳಿಗೆ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ಸೇರಿದಂತೆ ಹಲವು ಸಾಮಾಜಿಕ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ.

ಸೆ.25ರಂದು ಕುಶಾಲನಗರ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿರುವ ಬೆಳ್ಳಿ ಹಬ್ಬ ಸಮಾರಂಭದಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ನೆರವೇರಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ. ಎನ್. ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮಡಿಕೇರಿ ಶಾಸಕ ಡಾ. ಮಂಥರ್ ಗೌಡ, ಮಾಜಿ ಸಚಿವ ಎಂ. ಪಿ. ಅಪ್ಪಚ್ಚು ರಂಜನ್, ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತ ಜಿ. ರಾಜೇಂದ್ರ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ. ಆರ್. ಸವಿತಾ ರೈ, ಎಂಎಲ್‌ಸಿ ಸುಜಾ ಕುಶಾಲಪ್ಪ, ಕುಶಾಲನಗರ ತಾಲೂಕು ಗ್ಯಾರೆಂಟಿ ಅನುಷ್ಟಾನ ಸಮಿತಿಯ ಅಧ್ಯಕ್ಷ ವಿ. ಪಿ. ಶಶಿಧರ್, ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಸಿ. ಲೋಕೇಶ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮತ್ತಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ರಾಜ್ಯ ಸಮಿತಿ ಸದಸ್ಯ ಟಿ. ಎನ್. ಮಂಜುನಾಥ್ ಪಾಲ್ಗೊಳ್ಳುವರು.

ಪ್ರಚಾರ ಸಮಿತಿ ಸಂಚಾಲಕ ರಘುಹೆಬ್ಬಾಲೆ ಮಾತನಾಡಿ, ಸಂಘದಲ್ಲಿ ಈ ಹಿಂದೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಬಿ.ಆರ್. ನಾರಾಯಣ್, ಎಂ.ಇ. ಮೊಹಿದ್ದೀನ್, ಕೆ.ಕೆ. ನಾಗರಾಜಶೆಟ್ಟಿ, ಎಂ.ಎನ್. ಚಂದ್ರಮೋಹನ್, ಸಬಲಂ ಬೋಜಣ್ಣ ರೆಡ್ಡಿ ಹಾಗೂ ರಘು ಹೆಬ್ಬಾಲೆ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುವುದು. ವಿವಿಧ ಕ್ಷೇತ್ರಗಳ ಸಾಧನೆ ಮಾಡಿದ ಡಾ. ಕಿಶೋರ್ ಕುಮಾರ್, ವಿ.ಪಿ. ಪ್ರಕಾಶ್, ಮುನೀರ್, ಮೋಹನ್ ಕುಮಾರ್, ಪದ್ಮ ಪುರುಷೋತ್ತಮ ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು ಎಂದು ಹೇಳಿದರು.

ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್, ಕಾರ್ಯದರ್ಶಿ ಕೆ. ಕೆ. ನಾಗರಾಜ್ ಶೆಟ್ಟಿ, ಬೆಳ್ಳಿ ಹಬ್ಬ ಸ್ವಾಗತ ಸಮಿತಿ ಸಹ ಸಂಚಾಲಕ ವಿನೋದ್ ಹೆಚ್.ವಿ., ಕ್ರೀಡಾ ಸಂಚಾಲಕರಾದ ಶಿವರಾಜ್ ಕೆ. ಜೆ. ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net