ಡಾ. ನಾ.ಸು. ಹರ್ಡೀಕರ್ ಶಾಖೆಯ ಬೆಳ್ಳಿ ಹಬ್ಬ

22 Dwd 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ತಾಲೂಕಿನ ನರೇಂದ್ರ ಗ್ರಾಮದ ಡಾ. ನಾ.ಸು. ಹರ್ಡೀಕರ್ ಖಾಸಗಿ ಶಾಖೆಯ 25ನೇ ವರ್ಷದ ಬೆಳ್ಳಿ ಹಬ್ಬದ ಮಹೋತ್ಸವ, ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಶುಕ್ರವಾರ ಜರುಗಿತು.

ಭಾರತ ಸೇವಾದಳ ಜಿಲ್ಲಾ ಹಾಗೂ ತಾಲೂಕು ಸಮಿತಿ, ನರೇಂದ್ರ ಗ್ರಾಮ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಭಾರತ ಸೇವಾದಳದ ರಾಜ್ಯಾಧ್ಯಕ್ಷ ಶಂಕರ ವಿ. ಮುಗದ ಉದ್ಘಾಟಿಸಿದರು. ಗ್ರಾಮದ ಶ್ರೀ ಮಳೆಪ್ಪಜ್ಜನ ಮಠದ ಶ್ರೀ ಸಂಗಮೇಶ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾಲೂಕು ಸೇವಾದಳ ಸಮಿತಿ ಅಧ್ಯಕ್ಷ ಮಂಜುನಾಥ ತಿರ್ಲಾಪುರ ಅಧ್ಯಕ್ಷತೆ ವಹಿಸಿದ್ದರು.

ಭಾರತ ಸೇವಾದಳದ ಜಿಲ್ಲಾ ಸಮಿತಿ ಅಧ್ಯಕ್ಷೆ ಗೀತಾ ಮರಲಿಂಗನ್ನವರ, ಪ್ರಧಾನ ಕಾರ್ಯದರ್ಶಿ ಶಂಕರ ಗಂಗಣ್ಣವರ, ತಾಲೂಕು ಉಪಾಧ್ಯಕ್ಷೆ ಆರತಿ ಹಿರೇಮಠ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಷ್ಣು ಹೆಬ್ಬಾರ್, ಗ್ರಾಮದ ಶಾಲೆಗಳ ಎಸ್‌ಡಿಎಂಸಿ ಅಧ್ಯಕ್ಷರು, ಮುಖ್ಯಾಧ್ಯಾಪಕರು, ಜಿ.ಪಂ. ಮಾಜಿ ಸದಸ್ಯ ಕರೆಪ್ಪ ಮಾದರ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net