

ಮಡಿಕೇರಿ: ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಯಶಸ್ವಿಯಾಗಿ ೨೫ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶಾಲೆಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಬೆಳ್ಳಿ ಮಹೋತ್ಸವದ ಲೋಗೋವನ್ನು ಶನಿವಾರ ಅನಾವರಣಗೊಳಿಸಲಾಯಿತು.
ಕೊಡವ ಸಮಾಜದ ಹಾಗೂ ಶಾಲೆಯ ಅಧ್ಯಕ್ಷ ಮಂಡುವಂಡ.ಪಿ.ಮುತ್ತಪ್ಪನವರು ಲೋಗೋ ವಿಡಿಯೋವನ್ನು ಉದ್ಘಾಟಿಸಿದರು. ಕೊಡವ ಸಮಾಜದ ಉಪಾಧ್ಯಕ್ಷ ಹಾಗೂ ಶಾಲೆಯ ಕಾರ್ಯಧ್ಯಕ್ಷ ನಂದಿನೆರವಂಡ ಚೀಯಣ್ಣರವರು ಲೋಗೋ ಅನಾವರಣಗೊಳಿಸಿದರು.
ನಂತರ ಮಾತನಾಡಿದ ಮಂಡುವಂಡ.ಪಿ.ಮುತ್ತಪ್ಪ, ಜನರಲ್ ತಿಮ್ಮಯ್ಯ ಶಾಲೆಯು ಉತ್ತಮ ಶಿಕ್ಷಣವನ್ನು ನೀಡುವ ಮೂಲಕ ಮಾದರಿ ಶಾಲೆಯಾಗಿ ಇಂದು ೨೫ನೇ ವರ್ಷಕ್ಕೆ ಪಾದಾರ್ಪಣೆ ಮಾಡಿ ಬೆಳ್ಳಿ ಮಹೋತ್ಸವವನ್ನು ಆಚರಿಸುತ್ತಿದೆ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ತರಬೇಕೆಂದು ತಿಳಿಸಿದರು.
ವೇದಿಕೆಯಲ್ಲಿ ಶಾಲಾ ಕರೆಸ್ಪಾಡೆಂಟ್ ಕನ್ನಂಡ ಕವಿತಕಾವೆರಮ್ಮ, ಆಡಳಿತ ಮಂಡಳಿಯ ನಿರ್ದೇಶಕರುಗಳಾದ ನಂದಿನೆರವಂಡ ಎಂ.ದಿನೇಶ್, ಕೇಕಡ ದೇವಯ್ಯ, ಕಾಳಚಂಡ ಅಪ್ಪಣ್ಣ, ಪುತ್ತರಿರ ಕರುಣ್‌ಕಾಳಯ್ಯ, ಮಂಡೀರ ಸದಾ ಮುದ್ದಪ್ಪ, ಮೂವೇರ ಜಯರಾಂ, ಹಿರಿಯ ಶಿಕ್ಷಣಸಲಹೆಗಾರರಾದ ಚೌರೀರ ಕಾವೇರಿಪೂವಯ್ಯ, ಅಮ್ಮಟಂಡ ಪಾರ್ವತಿಅಪ್ಪಯ್ಯ, ಶಾಲಾ ಪ್ರಾಂಶುಪಾಲೆ ಕಲ್ಲುಮಾಡಂಡ ಸರಸ್ವತಿಸುಬ್ಬಯ್ಯ, ಶಾಲಾ ಶಿಕ್ಷಕಿ ಸುಮಿತ್ರ ಈರಪ್ಪ ಉಪಸ್ಥಿತರಿದ್ದರು. ಶಾಲಾ ಶಿಕ್ಷಕವೃಂದ, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.