

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ದ.ಕ.ಜಿಲ್ಲಾ ಹಾಲು ಒಕ್ಕೂಟ ವ್ಯಾಪ್ತಿಯಲ್ಲಿ 3.5ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿರುವುದು ಉತ್ಪಾದಕರ ಪರಿಶ್ರಮ ಹಾಗೂ ದಕ್ಷತೆಯ ಫಲವಾಗಿದೆ ಎಂದು ದ.ಕ.ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಹೇಳಿದರು. ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ ಉದ್ಘಾಟಿಸಿ ಮಾತನಾಡಿದರು.
ಬಂದಾರು ಹಾಲು ಉತ್ಪಾದಕರ ಮಹಿಳಾ ಸಂಘದ ಅಧ್ಯಕ್ಷೆ ರಾಜೇಶ್ವರಿ ಕಬಿಲಾಲಿ ಅಧ್ಯಕ್ಷತೆ ವಹಿಸಿದ್ದರು. ದ.ಕ. ಹಾಲು ಒಕ್ಕೂಟದ ಉಪಾಧ್ಯಕ್ಷ ಜಯರಾಮ ರೈ, ನಿರ್ದೇಶಕರಾದ ಪದ್ಮನಾಭ ಶೆಟ್ಟಿ ಅರ್ಕಜೆ, ನಾರಾಯಣ ಪ್ರಕಾಶ್, ಸವಿತಾ ಎನ್.ಶೆಟ್ಟಿ, ಉಡುಪಿ ಎಸ್‌ಕೆಡಿಆರ್‌ಡಿಪಿಬಿಸಿ ಟ್ರಸ್ಟ್‌ನ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ,್ಲ ಪುತ್ತೂರು ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಎಸ್.ಎಂ. ರಘು, ಬಂಟ್ವಾಳ ವಕೀಲರ ಸಂಘದ ಮಾಜಿ ಅಧ್ಯಕ್ಷ ಉಮೇಶ ಗೌಡ ವೈ.ಏನಾಜೆ, ಬಂದಾರು ಹಾ.ಉ.ಮ.ಸ. ಸಂಘದ ಸ್ಥಾಪಕಾಧ್ಯಕ್ಷೆ ಚಂದ್ರಾಕ್ಷಿ ದಂಡುಗ, ಸ್ಥಾಪಕ ಕೆ.ಲಕ್ಷ್ಮಣ ಗೌಡ, ಬೆಳ್ಳಿ ಹಬ್ಬ ಸಮಿತಿ ಅಧ್ಯಕ್ಷ ಜಗದೀಶ ಗೌಡ ಕೊಂಬೇಡಿ, ದ.ಕ.ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಸತೀಶ್ ರಾವ್, ಸಹಾಯಕ ವ್ಯವಸ್ಥಾಪಕ ಡಾ.ಜಿತೇಂದ್ರ ಪ್ರಸಾದ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್, ಬೆಳ್ಳಿಹಬ್ಬ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಾರಾಯಣ ಗೌಡ ಮುಚ್ಚೂರು, ಸತೀಶ್ ಕಾರ್ಯಕ್ರಮ ನಿರೂಪಿಸಿದರು. ಸಂಘದ ಕಾರ್ಯನಿರ್ವಹಣಾಧಿಕಾರಿ ಭವ್ಯಾ ಕೆ.ಎಸ್. ಸ್ವಾಗತಿಸಿದರು.
ಸಮಾರೋಪ: ಸಂಜೆ ನಡೆದ ರಜತ ಮಹೋತ್ಸವ ಸಮಾರೋಪ ಸಮಾರಂಭಲ್ಲಿ ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ಜಗದೀಶ್ ಕೊಂಬೇಡಿ ಅಧ್ಯಕ್ಷತೆ ವಹಿಸಿದ್ದರು.ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್, ಯುವ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕ, ಗ್ರಾಪಂ ಅಧ್ಯಕ್ಷ ದಿನೇಶ್ ಕಂಡಿಗ, ಸಂಘದ ಸ್ಥಾಪಕ ಲಕ್ಷ್ಮಣ ಗೌಡ ಕೊಂಬೇಡಿ, ಗ್ರಾಪಂ ಮಾಜಿ ಅಧ್ಯಕ್ಷೆ ಪರಮೇಶ್ವರಿ, ಆಡಳಿತ ಮಂಡಳಿ ಮತ್ತು ರಜತ ಮಹೋತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಕಾರ್ಯನಿರ್ವಹಣಾಧಿಕಾರಿ ಭವ್ಯಾ ವಂದಿಸಿದರು.
ಬೆಳ್ಳಿ ಹಬ್ಬ ಪ್ರಯುಕ್ತ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಬಹುಮಾನ ವಿತರಿಸಲಾಯಿತು.ಸಂಘದ ಸ್ಥಾಪಕರು, ಸ್ಥಾಪಕಾಧ್ಯಕ್ಷರು, ಮಾಜಿ ಅಧ್ಯಕ್ಷರನ್ನು ಸನ್ಮಾನಿಸಲಾಯಿತು. ಅತಿಥಿಗಳಿಗೆ,ಆಡಳಿತ ಮಂಡಳಿ, ಬೆಳ್ಳಿಹಬ್ಬ ಸಮಿತಿ ಪದಾಧಿಕಾರಿಗಳಿಗೆ ಸ್ಮರಣಿಕೆ ಹಾಗೂ ಸದಸ್ಯರಿಗೆ ಉಡುಗೊರೆ ವಿತರಿಸಲಾಯಿತು.