

ಮೈಸೂರು: 36ನೇ ರಾಷ್ಟ್ರೀಯ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯಲ್ಲಿ ಮೈಸೂರಿನ ಯೋಗಪಟು ಎಚ್.ಖುಷಿ ಬೆಳ್ಳಿ ಪದಕ ಗಳಿಸಿದ್ದಾರೆ.
ಗುಜರಾತಿನ ಅಹಮದಾಬಾದ್‌ನಲ್ಲಿ ಇತ್ತೀಚಿಗೆ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದ ಯೋಗಾಸನ ಸ್ಪರ್ಧೆಯ ರಿದಮಿಕ್ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಖುಷಿ ಈ ಸಾಧನೆ ಮಾಡಿದ್ದಾರೆ. ಕರ್ನಾಟಕ ತಂಡದ ಯೋಗಪಟುಗಳು ಒಟ್ಟು ಒಂದು ಚಿನ್ನ, ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಗಳಿಸಿದ್ದಾರೆ.
ಮೊದಲನೇ ಬಾರಿಗೆ ಯೋಗಾಸನ ಕ್ರೀಡೆಯು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸೇರ್ಪಡೆಯಾಗಿದೆ. ಮೈಸೂರಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಮೊದಲ ವರ್ಷದ ವಿದ್ಯಾರ್ಥಿನಿ ಖುಷಿ, ನಗರದ ವಿವೇಕಾನಂದ ಯೋಗ ಮತ್ತು ಸಂಶೋಧನ ಕೇಂದ್ರದಲ್ಲಿ ಕಳೆದ 8 ವರ್ಷಗಳಿಂದ ಡಾ.ಪಿ.ಎನ್.ಗಣೇಶ್‌ಕುಮಾರ್ ಮಾರ್ಗದರ್ಶನದಲ್ಲಿ ಯೋಗ ಅಭ್ಯಾಸ ಮಾಡುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.