10ರಂದು ಬಸವ ಜಯಂತಿ ಸರಳ ಆಚರಣೆ

4 mlv 1
ಮಳವಳ್ಳಿ ಪಟ್ಟಣದ ತಾಲೂಕು ಕಚೇರ ಸಭಾಂಗಣದಲ್ಲಿ ಶನಿವಾರ ತಹಸೀಲ್ದಾರ್ ಲೋಕೇಶ್ ಅಧ್ಯಕ್ಷತೆಯಲ್ಲಿ ಬಸವ ಜಯಂತಿ ಆಚರಣೆಯ ಪೂರ್ವಭಾವಿ ಸಭೆ ನಡೆಯಿತು. ಬಿಇಒ ಚಂದ್ರಪಾಟೀಲ್ ಇದ್ದರು.
Published on

ಮಳವಳ್ಳಿ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮೇ 10ರಂದು ಬಸವ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಹಸೀಲ್ದಾರ್ ಲೋಕೇಶ್ ತಿಳಿಸಿದರು.

ಬಸವ ಜಯಂತಿ ಆಚರಣೆ ಸಂಬಂಧ ಶನಿವಾರ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾನ್ ದಾರ್ಶನಿಕ ವಚನಕಾರ ಬಸವೇಶ್ವರರ ಜನ್ಮ ದಿನವನ್ನು ತಾಲೂಕು ಆಡಳಿತ ವತಿಯಿಂದ ಆಚರಿಸಲಾಗುತ್ತಿದ್ದು, ಈ ಹಿಂದೆ ಎಲ್ಲರ ಸಹಕಾರದೊಡನೆ ಅದ್ದೂರಿಯಾಗಿ ಆಚರಿಸಲಾಗಿದೆ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ವಿಜೃಂಭಣೆಯ ಸಮಾರಂಭಕ್ಕೆ ಅವಕಾಶವಿಲ್ಲ. ಆದ್ದರಿಂದ ಕಚೇರಿ ಸಭಾಂಗಣದಲ್ಲೇ ಅಂದು ಸರಳವಾಗಿ ಆಯೋಜಿಸಲಾಗುವುದು. ಸರ್ವ ಸಮುದಾಯಗಳ ಮುಖಂಡರು ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಆಗಮಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದು ಕೋರಿದರು.

ಸಭೆಯಲ್ಲಿ ಬಿಇಒ ಚಂದ್ರಪಾಟೀಲ್, ಕಸಾಪ ತಾಲೂಕು ಅಧ್ಯಕ್ಷ ಚೇತನ್‌ಕುಮಾರ್ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net